ಆಗಸ್ಟ್ ನಲ್ಲಿ ಮೂರು ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ. ಬುಧ ಗ್ರಹವು ಒಂದೇ ತಿಂಗಳಲ್ಲಿ ಎರಡು ಬಾರಿ ರಾಶಿಯನ್ನು ಬದಲಾಯಿಸುತ್ತದೆ. ಆಗಸ್ಟ್ ಆರಂಭದಲ್ಲಿ, ಬುಧ ಗ್ರಹವು ಸಿಂಹ ರಾಶಿಯನ್ನು ಪ್ರವೇಶಿಸುತ್ತದೆ.
ನವದೆಹಲಿ : ಆಗಸ್ಟ್ ನಲ್ಲಿ ಮೂರು ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ. ಬುಧ ಗ್ರಹವು ಒಂದೇ ತಿಂಗಳಲ್ಲಿ ಎರಡು ಬಾರಿ ರಾಶಿಯನ್ನು ಬದಲಾಯಿಸುತ್ತದೆ. ಆಗಸ್ಟ್ ಆರಂಭದಲ್ಲಿ, ಬುಧ ಗ್ರಹವು ಸಿಂಹ ರಾಶಿಯನ್ನು ಪ್ರವೇಶಿಸುತ್ತದೆ. ಆಗಸ್ಟ್ 26 ರಂದು, ಮತ್ತೆ ರಾಶಿಚಕ್ರವನ್ನು ಬದಲಾಯಿಸುವ ಮೂಲಕ ಕನ್ಯಾರಾಶಿಗೆ ಪ್ರವೇಶಿಸುತ್ತದೆ. ಅದೇ ಸಮಯದಲ್ಲಿ, ಸೂರ್ಯ ಸಿಂಹ ರಾಶಿಯಲ್ಲಿ ಗೋಚರಿಸಿದರೆ, ಶುಕ್ರ ಕನ್ಯಾರಾಶಿಯನ್ನು ಪ್ರವೇಶಿಸಲಿದೆ. ಈ ಬದಲಾವಣೆಗಳು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳು ಯಾವ ರಾಶಿಯವರಿಗೆ ಶುಭವಾಗಿರಲಿದೆ ನೋಡೋಣ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಮೇಷ ರಾಶಿಯವರಿಗೆ ಆಗಸ್ಟ್ ತಿಂಗಳು ಶುಭಕರವಾಗಿರುತ್ತದೆ. ಅವರು ತಮ್ಮ ಕೆಲಸಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಪಾಲುದಾರಿಕೆಯಲ್ಲಿ ಈ ರಾಶಿಯವರು, ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಸ್ಥಗಿತಗೊಂಡಿರುವ ಯಾವುದೇ ಪ್ರಮುಖ ಕೆಲಸವನ್ನು ಈ ತಿಂಗಳಲ್ಲಿ ಪೂರ್ಣಗೊಳಿಸಬಹುದು.
ವೃಷಭ ರಾಶಿಯ ಜನರು, ಈ ತಿಂಗಳು ತಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯಬಹುದು. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ನಿಕಟ ಸಂಬಂಧಗಳು ಸಹಾಯ ಮಾಡುತ್ತವೆ.
ಮಿಥುನ ರಾಶಿಯವರಿಗೆ ಈ ತಿಂಗಳು ಅದ್ಭುತವಾಗಿರುತ್ತದೆ. ಉದ್ಯೋಗ-ವ್ಯವಹಾರದಲ್ಲಿ ಯಶಸ್ಸು ಕಂಡು ಬರುತ್ತದೆ. ಆರ್ಥಿಕ ಲಾಭ ಇರುತ್ತದೆ. ಭಡ್ತಿ ಪಡೆಯಬಹುದು. ಗೌರವ ಸಿಗುತ್ತದೆ.
ಸಿಂಹ ರಾಶಿಯವರಿಗೆ ಈ ತಿಂಗಳು ಉತ್ತಮವಾಗಿರುತ್ತದೆ. ಜೊತೆಗೆ ಅವರು ತಮ್ಮ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನೂ ಪಡೆಯುತ್ತಾರೆ. ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
ತುಲಾ ರಾಶಿಯವರಿಗೆ ಧನ ಲಾಭವಾಗುವ ಯೋಗ ಪ್ರಬಲವಾಗಿದೆ. ವೃತ್ತಿಜೀವನದಲ್ಲಿಯೂ, ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ತಂದೆಗೆ ಇದು ಒಳ್ಳೆಯ ಸಮಯವಾಗಿರುತ್ತದೆ.