ನವದೆಹಲಿ : ಇಂದು ಗುಜರಾತ್ನಲ್ಲಿ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಉಚಿತ ಪಡಿತರವು ಬಡವರ ಸಂಕಷ್ಟವನ್ನು ನೀಗಿಸಿ ಅವರಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಯ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ(PM Narendra Modi), ಕೊರೋನಾ ಸಮಯದಲ್ಲಿ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು 2 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಒದಗಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಈ ಯೋಜನೆಯಲ್ಲಿ ತಿಂಗಳಿಗೆ ಕೇವಲ 55 ರೂ. ಹೂಡಿಕೆ ಮಾಡಿ ಪಡೆಯಿರಿ 3 ಸಾವಿರ ರೂ. ಪಿಂಚಣಿ
ಬಡವರು "ಏನೇ ಆಪತ್ತು ಬಂದರೂ ದೇಶ ತನ್ನೊಂದಿಗಿದೆ"(whatever might be the calamity, the country is with him) ಎಂದು ಭಾವಿಸಬೇಕು ಎಂದು ಪ್ರಧಾನಿ ಹೇಳಿದರು.
ಬಡತನದ ವಿರುದ್ಧ ಹೋರಾಡುವ ಮತ್ತು ಬಡವರಿಗೆ ಕಡಿಮೆ ದರದಲ್ಲಿ ಆಹಾರ(Food)ವನ್ನು ನೀಡುವ ಸರ್ಕಾರದ ಪ್ರಯತ್ನಗಳನ್ನು ಮೋದಿ ಶ್ಲಾಘಿಸಿದರು. ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ವಿತರಣಾ ವ್ಯವಸ್ಥೆಗೆ ತಂತ್ರಜ್ಞಾನದ ಬಳಕೆಯನ್ನು ಅವರು ಶ್ಲಾಘಿಸಿದರು.
आज गुजरात के लाखों परिवारों को पीएम गरीब कल्याण अन्न योजना के तहत एक साथ मुफ्त राशन वितरित किया जा रहा है।
ये मुफ्त राशन वैश्विक महामारी के इस समय में गरीब की चिंता कम करता है, उनका विश्वास बढ़ाता है: PM @narendramodi
— PMO India (@PMOIndia) August 3, 2021
ಸ್ವಾತಂತ್ರ್ಯದ ನಂತರ, ಪ್ರತಿಯೊಂದು ಸರ್ಕಾರವೂ ಬಡವರಿಗೆ(Poor) ಕಡಿಮೆ ದರದಲ್ಲಿ ಆಹಾರವನ್ನು ಒದಗಿಸುವ ಬಗ್ಗೆ ಚಿಂತಿಸಿತ್ತು ಆದರೆ ಅಗ್ಗದ ಪಡಿತರ ಯೋಜನೆಗಳ ವ್ಯಾಪ್ತಿ ಮತ್ತು ಬಜೆಟ್ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದ್ದರೂ, ಪರಿಣಾಮವು ಸೀಮಿತವಾಗಿರಬೇಕಿತ್ತು.
"ದೇಶದ ಆಹಾರ ದಾಸ್ತಾನು ಹೆಚ್ಚುತ್ತಲೇ ಇದೆ, ಆದರೆ ಹಸಿವು(Hungry) ಮತ್ತು ಅಪೌಷ್ಟಿಕತೆಯು ಆ ಪ್ರಮಾಣದಲ್ಲಿ ಕಡಿಮೆಯಾಗಲಿಲ್ಲ. ಇದಕ್ಕೆ ಒಂದು ಪ್ರಮುಖ ಕಾರಣವೆಂದರೆ ಪರಿಣಾಮಕಾರಿ ವಿತರಣಾ ವ್ಯವಸ್ಥೆಯ ಕೊರತೆ. ಈ ಪರಿಸ್ಥಿತಿಯನ್ನು ಬದಲಾಯಿಸಲು 2014 ರ ನಂತರ ಹೊಸದಾಗಿ ಕೆಲಸ ಆರಂಭಿಸಲಾಯಿತು ಎಂದು ಮೋದಿ ಹೇಳಿದರು.
ಇದನ್ನೂ ಓದಿ : ನಿಮ್ಮ ಕಾರಿನಲ್ಲಿ ಎಷ್ಟು ಏರ್ ಬ್ಯಾಗ್ ಗಳಿರಬೇಕು? ನಿತಿನ್ ಗಡ್ಕರಿ ಹೇಳಿದ್ದೇನು ?
ಹೊಸ ತಂತ್ರಜ್ಞಾ)ವನ್ನು ಬಳಸಿಕೊಂಡು ಕೋಟ್ಯಂತರ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ ಹೊರಹಾಕಲಾಗಿದೆ ಮತ್ತು ಪಡಿತರ ಚೀಟಿ(Ration Card)ಗಳನ್ನು ಆಧಾರ್ ಕಾರ್ಡ್ಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ಶತಮಾನದ ಅತಿದೊಡ್ಡ ಅನಾಹುತದವಾದ ಕೊರೋನಾ ಸಮಯದಲ್ಲಿ ಯಾವುದೇ ನಾಗರಿಕರು ಹಸಿವಿನಿಂದ ಬಳಲುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು ಇದು ಸಹಾಯ ಮಾಡಿತು ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ