ಬಿಜೆಪಿ 2ನೇ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಟಿಕೆಟ್!

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಓರ್ವ ಮಹಿಳೆಗೂ ಟಿಕೆಟ್ ದೊರೆತಿಲ್ಲ.

Last Updated : Apr 16, 2018, 06:38 PM IST
ಬಿಜೆಪಿ 2ನೇ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಟಿಕೆಟ್! title=

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಓರ್ವ ಮಹಿಳೆಗೂ ಟಿಕೆಟ್ ದೊರೆತಿಲ್ಲ.

ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಇದೇ ಮೇ 12 ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ಏ.8ರಂದು ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪೈಕಿ ಮೂವರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಅವರಲ್ಲಿ ನಿಪ್ಪಾಣಿಯಿಂದ ಶಶಿಕಲಾ ಜೊಲ್ಲೆ, ಕಾರವಾರದಿಂದ ರೂಪಾಲಿ ನಾಯ್ಕ್ ಹಾಗೂ ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಾಗಿತ್ತು. 

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಆದರೆ, ಇಂದು ಮಧ್ಯಾಹ್ನ ಬಿಜೆಪಿ ಬಿಡುಗಡೆ ಮಾಡಿದ 82 ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಓರ್ವ ಮಹಿಳೆಗೂ ಟಿಕೆಟ್ ನೀಡದೆ, ಹೈಕಮ್ಯಾಂಡ್ ಅಬ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಇದು ಬಿಜೆಪಿ ಮಹಿಳಾ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ.

Trending News