ಬೆಂಗಳೂರು: ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಅನಗತ್ಯ ಖರ್ಚುಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಕಡಿವಾಣ ಹಾಕಿದ್ದು, ಹಾರ ತುರಾಯಿ ತರದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡವೆಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ಮುಖ್ಯಮಂತ್ರಿ @BSBommai ರವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. pic.twitter.com/SwSd4ZG5ca
— CM of Karnataka (@CMofKarnataka) August 10, 2021
ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ತರುವುದು ಬೇಡ. ಅನಗತ್ಯವಾಗಿ ಖರ್ಚು ವೆಚ್ಚ ಮಾಡುವುದು ಬೇಡವೆಂದು ಸಿಎಂ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಅನಗತ್ಯ ಖರ್ಚುವೆಚ್ಚ ಮಾಡದಂತೆ ಸಿಎಂ ಸೂಚಿಸಿದ ಬೆನ್ನಲ್ಲಿಯೇ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ, ಶಾಲು, ನೆನಪಿನ ಕಾಣಿಕೆ ನೀಡಬಾರದು. ಆದರೆ ಕನ್ನಡ ಪುಸ್ತಕಗಳನ್ನು ನೀಡಿ ಗೌರವಿಸಬಹುದೆಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. pic.twitter.com/c5kIQOTc4r
— Basavaraj S Bommai (@BSBommai) August 10, 2021
ಇದನ್ನೂ ಓದಿ: ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ದುರಂತ: ಫೈಟರ್ ವಿವೇಕ್ ಸಾವು..!
ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದ ಬಳಿಕ ವಿ.ಸುನಿಲ್ ಕುಮಾರ್ ಅವರು ‘ನನ್ನ ನೋಡಲು ಬರುವವರು ಒಂದು ಕನ್ನಡ ಪುಸ್ತಕ ತನ್ನಿ’ ಅಂತಾ ಹೇಳಿ ಸುದ್ದಿಯಾಗಿದ್ದರು. ‘ಅಭಿನಂದಿಸಲು ಹಾರ ತುರಾಯಿ ತರಬೇಡಿ.. ಕೊಡಲೇಬೇಕು ಅಂದಿದ್ದರೆ ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ’ ಅಂತಾ ಸಚಿವರು ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂತ ತಮ್ಮನ್ನು ನೋಡಲು ಬರುವವರು ಹಾರ ತುರಾಯಿ ತರಬಾರದೆಂದು ಜನರಲ್ಲಿ ಮನವಿ ಮಾಡಿದ್ದರು. ಇದೀಗ ಅದನ್ನೇ ಪಾಲಿಸಲು ಮುಂದಾಗಿರುವ ಬಿಜೆಪಿ ನಾಯಕರ ಈ ನಡೆಯು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ