SC On Decriminalising Politics - ತಮ್ಮ ಅಭ್ಯರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಬಹಿರಂಗಪಡಿಸದ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಎಂಟು ರಾಜಕೀಯ ಪಕ್ಷಗಳಿಗೆ (Political Parties) ಸುಪ್ರೀಂ ಕೋರ್ಟ್ ಮಂಗಳವಾರ ದಂಡ ವಿಧಿಸಿದೆ. ಬಿಹಾರ ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು (Criminal Brackground) ಮಾಧ್ಯಮಗಳಲ್ಲಿ ಪ್ರಕಟಿಸದಿರುವ ವಿಚಾರದಲ್ಲಿ, ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಪಾಲಿಸದ 8 ಪಕ್ಷಗಳನ್ನು ನ್ಯಾಯ ನಿಂದನೆಯ ದೋಷಿ ಎಂದು ಪರಿಗಣಿಸಿದೆ.
ಈ ಪ್ರಕರಣದಲ್ಲಿ ಜೆಡಿಯು, ಆರ್ ಜೆಡಿ, ಎಲ್ ಜೆಪಿ, ಕಾಂಗ್ರೆಸ್, ಬಿಜೆಪಿ, ಸಿಪಿಐಗೆ ನ್ಯಾಯಾಲಯ ತಲಾ 1 ಲಕ್ಷ ದಂಡ ವಿಧಿಸಿದೆ. ಜೊತೆಗೆ ಸಿಪಿಎಂ ಮತ್ತು ಎನ್ಸಿಪಿಗೆ ತಲಾ 5 ಲಕ್ಷ ದಂಡ ವಿಧಿಸಿದೆ.
ಇದಲ್ಲದೆ, ಭವಿಷ್ಯದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು (Criminal Records) ತಮ್ಮ ವೆಬ್ಸೈಟ್ನಲ್ಲಿ (Party Website) ಹಾಕಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಚುನಾವಣಾ ಆಯೋಗವು ಆಪ್ ತಯಾರಿಸಬೇಕು ಮತ್ತು ಅದರಲ್ಲಿ ಮತದಾರರಿಗೆ ಈ ಕುರಿತಾದ ಎಲ್ಲಾ ಮಾಹಿತಿ ಲಭ್ಯವಾಗಬೇಕು ಎಂದು ನ್ಯಾಯಪೀಠ ಹೇಳಿದೆ. ಇದರೊಂದಿಗೆ, ಅಭ್ಯರ್ಥಿಯನ್ನು ಆಯ್ಕೆ ಮಾಡಿದ 48 ಗಂಟೆಗಳ ಒಳಗೆ ಪಕ್ಷವು ಅಪರಾಧ ದಾಖಲೆಯನ್ನು ಮಾಧ್ಯಮದಲ್ಲಿ ಪ್ರಕಟಿಸಬೇಕು. ಆದೇಶವನ್ನು ಪಾಲಿಸದಿದ್ದಲ್ಲಿ, ಆಯೋಗವು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಬೇಕು ಎಂದು ಹೇಳಿದೆ.
ಇದನ್ನೂ ಓದಿ-ಉಜ್ವಲಾ 2.0 ಯೋಜನೆ ಬಿಡುಗಡೆ, ಕೇವಲ ತುಂಬಿದ ಸಿಲಿಂಡರ್ ಅಷ್ಟೇ ಅಲ್ಲ ಒಲೆಯು ಉಚಿತ
MP/MLAಗೆ ಸಂಬಂಧಿಸದ ಪ್ರಕರಣಗಳನ್ನು ರಾಜ್ಯ ಸರ್ಕಾರಗಳು ಸುಲಭವಾಗಿ ಹಿಂಪಡೆಯುವಂತಿಲ್ಲ
ಇದರ ಜೊತೆಗೆ ಜನಪ್ರತಿನಿಧಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸರ್ಕಾರಗಳು ಇನ್ನು ಮುಂದೆ ನಿರಂಕುಶವಾಗಿ ಹಿಂಪಡೆಯಲು ಸಾಧ್ಯವಿಲ್ಲ. ಹೈಕೋರ್ಟ್ (High Court) ಅನುಮೋದನೆಯಿಲ್ಲದೆ ಯಾವುದೇ ರಾಜ್ಯ ಸರ್ಕಾರವು (State Governments) ಪ್ರಸ್ತುತ ಅಥವಾ ಮಾಜಿ ಜನಪ್ರತಿನಿಧಿಗಳ ವಿರುದ್ಧದ ಅಪರಾಧ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ. ಸಂಸದರು/ಶಾಸಕರ ವಿರುದ್ಧ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.
ಇದನ್ನೂ ಓದಿ- Marburg Virus: ಪಶ್ಚಿಮ ಆಫ್ರಿಕಾದ ಗಿನಿ ದೇಶದಲ್ಲಿ ದೊರೆತ ಮಾರಕ ಮಾರಬರ್ಗ್ ವೈರಸ್ ಮೊದಲ ಪ್ರಕರಣ, ಇಲ್ಲಿದೆ ವಿವರ
2016 ರಿಂದ ಬಾಕಿ ಉಳಿದಿದ್ದ ಈ ಪ್ರಕರಣದಲ್ಲಿ, ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಕೇಳಿತ್ತು. ಪ್ರತಿ ರಾಜ್ಯದಲ್ಲೂ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯಗಳನ್ನು (MP-MLA Court) ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ (Central Government) ನ್ಯಾಯಾಲಯ ಸೂಚಿಸಿದೆ. ಈ ಹಿಂದೆ, ಕಳೆದ ವರ್ಷ ಅಕ್ಟೋಬರ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು. ಅಂದಿನಿಂದ, ಕೇಂದ್ರವು ನ್ಯಾಯಾಲಯದ ಪ್ರಶ್ನೆಗಳಿಗೆ ವಿವರವಾದ ಉತ್ತರವನ್ನು ಸಲ್ಲಿಸಿಲ್ಲ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯವು ಸರ್ಕಾರದ ಗಂಭೀರತೆಯ ಬಗ್ಗೆ ಪ್ರಶ್ನೆ ಎತ್ತಿದೆ.
ಇದನ್ನೂ ಓದಿ-ವಾಹನ ಸವಾರರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ... ಶೀಘ್ರದಲ್ಲಿಯೇ ಪೆಟ್ರೋಲ್ ಡಿಸೇಲ್ ಬೆಲೆ...!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ