ಬೆಂಗಳೂರು : ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ರಾಜ್ಯ ಸರ್ಕಾರವು ಸೆಪ್ಟೆಂಬರ್ 6 ರಿಂದ 8 ರವರೆಗಿನ ತರಗತಿಗಳನ್ನ ಆರಂಭಿಸಲು ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಸೋಮವಾರ ನಿರ್ಧರಿಸಿದೆ. ಈ ಸಂಬಂಧ ಆದೇಶ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್(BC Nagesh), 6 ರಿಂದ 8 ನೇ ತರಗತಿಗಳನ್ನು ಪುನರಾರಂಭಿಸುವುದಾಗಿ ಹೇಳಿದರು. ತಾಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ದರವು 2% ಕ್ಕಿಂತ ಕಡಿಮೆಯಿದ್ದು, ಸೆಪ್ಟೆಂಬರ್ 6 ರಿಂದ ಆರಂಭವಾಗುತ್ತದೆ. ತರಗತಿಗಳನ್ನು ವಾರದಲ್ಲಿ 5 ದಿನಗಳವರೆಗೆ 50% ಹಾಜರಾತಿಯೊಂದಿಗೆ ನಡೆಸಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ : ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ
ರಾಜ್ಯ ಸರ್ಕಾರವು ಶಾಲೆಗಳನ್ನು 2 % ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ(COVID Positivity Rate) ಹೊಂದಿರುವ ಪ್ರದೇಶಗಳಲ್ಲಿ ಮಾತ್ರ ಮತ್ತೆ ತೆರೆಯಲು ಅನುಮತಿಸಲಾಗುವುದು. ತಜ್ಞರ ಸಮಿತಿ ಮತ್ತು ಸರ್ಕಾರಿ ಅಧಿಕಾರಿಗಳ ನಡುವಿನ ಸಭೆಯ ನಂತರ ಶಾಲೆಗಳನ್ನು ಮತ್ತೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳು
1. ರಾಜ್ಯ ಸರ್ಕಾರವು 6 ರಿಂದ 8 ನೇ ತರಗತಿಯು ವಾರದಲ್ಲಿ ಐದು ದಿನಗಳು ತೆರೆದಿರುತ್ತದೆ ಮತ್ತು ವಾರಾಂತ್ಯ(Weekend)ದಲ್ಲಿ ಶಾಲೆಗಳನ್ನ ಸ್ವಚ್ಛಗೊಳಿಸಲಾಗುವುದು.
2. ವಿದ್ಯಾರ್ಥಿಗಳು ಫೇಸ್ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಶಾಲೆಗಳು ಆರಂಭ
3. ಶಾಲೆಗೆ ಹಾಜರಾಗುವುದು ಕಡ್ಡಾಯವಲ್ಲ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರು ಆನ್ಲೈನ್(Online Class)ನಲ್ಲಿ ಅಧ್ಯಯನ ಮಾಡಲು ಆಯ್ಕೆ ಮಾಡಬಹುದು.
4. ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳು ಏಕಕಾಲದಲ್ಲಿ ನಡೆಯುತ್ತವೆ.
ಇದನ್ನೂ ಓದಿ : ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ
ಕೋವಿಡ್ -19 ಸ್ಥಿತಿಯನ್ನು ಅಧ್ಯಯನ ಮಾಡಲು ಮತ್ತು ಶಾಲೆಗಳನ್ನು(Schools) ಪುನಃ ತೆರೆಯಲು ಶಿಫಾರಸು ಮಾಡಲು 13 ಸದಸ್ಯರ ಸಲಹಾ ಮಂಡಳಿಯನ್ನು ಸ್ಥಾಪಿಸಲಾಗಿದೆ. ಸಮಿತಿಯು ಸರ್ಕಾರದ ಆದೇಶದಂತೆ ಹಂತ ಹಂತವಾಗಿ ಶಾಲೆಗಳನ್ನು ಮತ್ತೆ ತೆರೆಯಲು ಸೂಚಿಸಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.