ಇದು ಗಾಂಧಿ-ಗೋಡ್ಸೆ ಸಿದ್ಧಾಂತಗಳ ನಡುವಿನ ಯುದ್ಧ: ಬಿ.ಕೆ.ಹರಿಪ್ರಸಾದ್

ಇದು ಮಹಾತ್ಮಾ ಗಾಂಧೀಜಿ ಮತ್ತು ನಾಥುರಾಮ್ ಗೋಡ್ಸೆ ನಡುವಿನ ಯುದ್ಧ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. 

Last Updated : Apr 30, 2018, 02:51 PM IST
ಇದು ಗಾಂಧಿ-ಗೋಡ್ಸೆ ಸಿದ್ಧಾಂತಗಳ ನಡುವಿನ ಯುದ್ಧ: ಬಿ.ಕೆ.ಹರಿಪ್ರಸಾದ್ title=

ಮಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ಎರಡು ರಾಜಕೀಯ ಸಿದ್ಧಾಂತಗಳ ನಡುವೆ ನಡೆಯಲಿದೆ. ಇದು ಮಹಾತ್ಮಾ ಗಾಂಧೀಜಿ ಮತ್ತು ನಾಥುರಾಮ್ ಗೋಡ್ಸೆ ನಡುವಿನ ಯುದ್ಧ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. 

ಇಂದಿಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗಾಂಧೀಜಿಯವರ ಸರ್ವಧರ್ಮ ಸಿದ್ಧಾಂತ ಮತ್ತು ಗೋಡ್ಸೆಯ ಹಿಂಸಾತ್ಮಕ ಸಿದ್ಧಾಂತಗಳು ಈ ಬಾರಿಯ ಚುನಾವಣೆಯಲ್ಲಿ ಮುಖಾಮುಖಿ ಆಗಿವೆ. ಹಾಗಾಗಿ ಜನತೆ ಅಭಿವೃದ್ಧಿಯ ಜೊತೆಗೆ ಗಾಂಧೀಜಿ ಸಿದ್ಧಾಂತವನ್ನು ಪಾಲಿಸುತ್ತಿರುವ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದರು. 

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಅಲ್ಲದೆ, 5 ವರ್ಷಗಳ ಹಿಂದೆ ಜನತೆಗೆ ನೀಡಿದ್ದ ಸಾಕಷ್ಟು ಭರವಸೆಗಳನ್ನು ಈಡೇರಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಮೋಸಗಾರ ಸರ್ಕಾರ, ಇದುವರೆಗೂ ನೀಡಿದ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಕಿಡಿ ಕಾರಿದರು.

Trending News