ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ನಗರದ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಬಹುಮಹಡಿ ಮನೆ ಕುಸಿತ(Building Collapse)ವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
1974ರಲ್ಲಿ ಲಕ್ಕಸಂದ್ರ(Lakkasandra)ದಲ್ಲಿ ನಿರ್ಮಾಣವಾಗಿದ್ದ ಈ ಹಳೆಯ ಮನೆಯು ಸುರೇಶ್ ಎಂಬುವರ ಮಾಲೀಕತ್ವದಲ್ಲಿದೆ. ಕಟ್ಟಡ ಕುಸಿಯುವ ಮುನ್ಸೂಚನೆ ಹಿನ್ನೆಲೆ ಕಟ್ಟಡದಲ್ಲಿ ವಾಸವಾಗಿದ್ದ ಸುಮಾರು 20 ಜನರನ್ನು ತೆರವುಗೊಳಿಸಲಾಗಿತ್ತು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಗೆಂದು ಕಾರ್ಮಿಕರು ಬಂದು ಈ ಮನೆಯಲ್ಲಿ ವಾಸವಾಗಿದ್ದರು. ಕಟ್ಟಡ ಕುಸಿಯುವುದಕ್ಕಿಂತ ಮುಂಚೆಯೇ ಅವರನ್ನು ಅಗ್ನಿಶಾಮಕ ಸಿಬ್ಬಂದಿ ತೆರವುಗೊಳಿಸಿದ್ದರಿಂದ ಭಾರೀ ಅಪಾಯ ತಪ್ಪಿದಂತಾಗಿದೆ.
ಇದನ್ನೂ ಓದಿ: ಕೌಟುಂಬಿಕ ಕಲಹ?: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾವು..!
3 ಅಂತಸ್ತಿನ ಹಳೇ ಕಟ್ಟಡ ಸಂಪೂರ್ಣವಾಗಿ ನೆಲಕಚ್ಚಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ. ಸುಮಾರು 47 ವರ್ಷಗಳಷ್ಟು ಹಳೆಯ ಕಟ್ಟಡ ಕುಸಿತ ಕಂಡಿದ್ದರಿಂದ ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ನಿನ್ನೆ(ಸೆ.26) ಏನಾದರೂ ಕಟ್ಟಡ ಕುಸಿತ ಕಂಡಿದ್ದರೆ 40 ಮಂದಿ ಸಾವನ್ನಪ್ಪುವ ಸಾಧ್ಯತೆ ಇತ್ತು ಎಂದು ತಿಳಿದುಬಂದಿದೆ. ಹಳೇ ಕಟ್ಟಡ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾರೂ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಇದನ್ನೂ ಓದಿ: ಕೊರೊನಾ ಲಸಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದ ಕರ್ನಾಟಕ
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ದುರಂತರಗಳ ಮೇಲೆ ದುರಂತ ನಡೆಯುತ್ತಿವೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬಳಿಕ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು. ವಿವಿಪುರಂನ ನ್ಯೂ ತರಗುಪೇಟೆಯ ಗೊಡೌನ್ನಲ್ಲಿ ಭಯಾನಕ ಪಟಾಕಿ ಸ್ಫೋಟದಿಂದ ಹಲವರು ಮೃತಪಟ್ಟಿದ್ದರು. ಇದೀಗ 3 ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿತ ಕಂಡಿದೆ. ಸದ್ಯ ಕುಸಿತ ಕಂಡಿರುವ ಬಹುಮಹಡಿ ಕಟ್ಟಡದ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸ್ಥಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.