ಶಾರ್ಜಾ: ಶಾರ್ಜಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ೪೪ ನೆ ಪಂದ್ಯದಲ್ಲಿ ಚೆನ್ನೈ ತಂಡವು ಹೈದರಾಬಾದ್ ವಿರುದ್ಧ ಆರು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ಚೆನ್ನೈ ತಂಡವು ಬೀಗುವಿನ ಬೌಲಿಂಗ್ ಮೂಲಕ ಗಮನ ಸೆಳೆಯಿತು. ಚೆನ್ನೈ (CSK) ಪರವಾಗಿ ಹೇಜಲ್ ವೂಡ್ ಮೂರು ಹಾಗೂ ಡಿ.ಜೆ.ಬ್ರಾವೋ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಹೈದರಾಬಾದ್ ತಂಡವನ್ನು ನಿಯಂತ್ರಿಸಿದರು.
ಇದನ್ನೂ ಓದಿ - IPL 2021: ರಾಜಸ್ಥಾನ್ ರಾಯಲ್ಸ್‌ಗೆ ಮತ್ತೊಂದು ದೊಡ್ಡ ಹೊಡೆತ
ಹೈದರಾಬಾದ್ ತಂಡದ ಪರವಾಗಿ ವೃದ್ದಿಮಾನ್ ಸಹ 44 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರ ಕೂಡ 20 ರ ಗಡಿಯನ್ನು ದಾಟಲಿಲ್ಲ.ಕೊನೆಗೆ ಹೈದರಾಬಾದ್ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 134 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.
'Thala' @msdhoni's special message for @ChennaiIPL fans. 💛 💛 #VIVOIPL #SRHvCSK
🎥 👇 pic.twitter.com/586nenfJ3T
— IndianPremierLeague (@IPL) September 30, 2021
135 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿಯೇ ರುತುರಾಜ್ ಗಾಯಕ್ವಾಡ್( 45) ದುಫ್ಲೆಸಿಸ್ (41) ರನ್ ಗಳ ನೆರವಿನಿಂದಾಗಿ ಕೇವಲ ನಾಲ್ಕು ವಿಕೆಟ್ ನಷ್ಟಕ್ಕೆ ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ಚೆನ್ನೈ ತಂಡವು ಗೆಲುವಿನ ದಡವನ್ನು ಸೇರಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.