ನವದೆಹಲಿ: ಕಾಂಗ್ರೆಸ್ ಹೈಕಮಾಂಡ್(Congress HighCommand) ತುರ್ತು ಬುಲಾವ್ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಸೋನಿಯಾ(Sonia Gandhi)ರನ್ನು ಭೇಟಿಯಾದ ಸಿದ್ದರಾಮಯ್ಯರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಸಾಥ್ ನೀಡಿದರು. ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಸುಮಾರು 30 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆಂದು ಹೇಳಲಾಗಿದೆ.
ಇದನ್ನೂ ಓದಿ: ಬಿಜೆಪಿ ಆಳ್ವಿಕೆಯಲ್ಲಿ ಕೊಲೆಗಾರರಿಗೆ ಸನ್ಮಾನ, ಸಂತೈಸುವವರಿಗೆ ಬಂಧನ: ಕಾಂಗ್ರೆಸ್ ಟೀಕೆ
ಭೇಟಿ ವೇಳೆ ಹಾನಗಲ್, ಸಿಂದಗಿ ಉಪಚುನಾವಣೆ(Sindagi & Hangal By election)ಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆ, ಪದಾಧಿಕಾರಿಗಳ ನೇಮಕ, ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇದಲ್ಲದೆ ಸಿದ್ದರಾಮಯ್ಯರ ಅಭಿಪ್ರಾಯವನ್ನು ಕೇಳಿರುವ ಸೋನಿಯಾ ಗಾಂಧಿ ಎಐಸಿಸಿ ಪುನರ್ ರಚನೆ ಬಗ್ಗೆಯೂ ಸಲಹೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸೋನಿಯಾ ಗಾಂಧಿ(Sonia Gandhi)ಭೇಟಿಗಾಗಿ ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಸಿದ್ದರಾಮಯ್ಯನವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸೋನಿಯಾ ಗಾಂಧಿ ಯಾವ ಕಾರಣಕ್ಕೆ ಭೇಟಿಗೆ ಕರೆದಿದ್ದಾರೋ ನನಗೆ ಗೊತ್ತಿಲ್ಲ. ಭೇಟಿ ಮಾಡಿದ ಬಳಿಕವಷ್ಟೇ ಗೊತ್ತಾಗುತ್ತದೆ. ನಾನು ರಾಷ್ಟ್ರ ರಾಜಕೀಯಕ್ಕೆ ಹೋಗುವುದಿಲ್ಲ. ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ. ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡುವುದಿಲ್ಲ’ವೆಂದು ತಿಳಿಸಿದ್ದರು.
ಇದನ್ನೂ ಓದಿ: ನಿಮ್ಮ ಕುಟುಂಬದ ಆಸ್ತಿ ಎಷ್ಟು ಸಾವಿರ ಕೋಟಿ ಇದೆ: ಖರ್ಗೆಗೆ ಬಿಜೆಪಿ ಪ್ರಶ್ನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.