ಜಮ್ಮು-ಕಾಶ್ಮೀರ: ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ

ಛತ್ತಾಬಲ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಬಳಿಕ ಭದ್ರತಾ ಪಡೆಗಳು ಸಕ್ರಿಯವಾಗಿವೆ.

Last Updated : May 5, 2018, 10:31 AM IST
ಜಮ್ಮು-ಕಾಶ್ಮೀರ: ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ title=
Pic: ANI

ಶ್ರೀನಗರ: ಜಮ್ಮು-ಕಾಶ್ಮೀರದ ಛತ್ತಾಬಲ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಶನಿವಾರ (ಏಪ್ರಿಲ್ 5) ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಎನ್ಕೌಂಟರ್ ಮುಂದುವರಿಯುತ್ತಿದೆ. ಗುಂಡಿನ ದಾಳಿ ನಿರಂತರವಾಗಿ ಉಗ್ರಗಾಮಿಗಳಿಂದ ಉಂಟಾಗಿದ್ದು, ನಂತರ ಸೈನ್ಯವು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿವೆ. ಛತ್ತಾಬಲ್ ಪ್ರದೇಶದ ಭಯೋತ್ಪಾದಕರ ಗುಂಡಿನ ಬಳಿಕ ಭದ್ರತಾ ಪಡೆಗಳು ಸಕ್ರಿಯವಾಗಿವೆ. ಭದ್ರತಾ ಪಡೆಗಳು ಸಂಪೂರ್ಣವಾಗಿ ಪ್ರದೇಶವನ್ನು ಸುತ್ತುವರೆದಿವೆ ಎಂದು ವರದಿಗಳು ತಿಳಿಸಿವೆ.

ಸಿಆರ್ಪಿಎಫ್ ಸಿಬ್ಬಂದಿಗೆ ಗಾಯ
ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ ಸೈನಿಕ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಶನಿವಾರ ಬೆಳಿಗ್ಗೆ 4.30 ರ ವೇಳೆಗೆ ಛತ್ತಾಬಲ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಬಳಿಕ ಭದ್ರತಾ ಪಡೆಗಳು ಸಕ್ರಿಯವಾಗಿವೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Trending News