ನವದೆಹಲಿ: ಪಂಜಾಬ್,ರಾಜಸ್ಥಾನ ಮತ್ತು ಛತ್ತೀಸ್ಗಡದ ಮುಖ್ಯಮಂತ್ರಿಗಳು ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಸೇರಿದಂತೆ ಹಲವು ಹಿರಿಯ ನಾಯಕರು ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ವಹಿಸಿಕೊಳ್ಳಬೇಕೆಂದು ಒತ್ತಾಯಿಸಿದ ಬೆನ್ನಲ್ಲೇ ಅವರು ಈ ನಿರ್ಧಾರವನ್ನು ಪರಿಗಣಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Global Hunger Index ಪ್ರಶ್ನಿಸಿದ ಕೇಂದ್ರ ಸರ್ಕಾರ, ಅವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲಾಗಿದೆ ಎಂದ ಸರ್ಕಾರ
ಇಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕೆಂದು ಹಲವು ನಾಯಕರು ಒತ್ತಾಯಿಸಿದ್ದಾರೆ. ಮುಂದಿನ ವರ್ಷ ಆಗಸ್ಟ್ 21 ಹಾಗೂ ಸೆಪ್ಟೆಂಬರ್ 20 ರ ನಡುವೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ.'ಇಡೀ ಕಾಂಗ್ರೆಸ್ ಪಕ್ಷ ಮತ್ತು ಕಾರ್ಯಕರ್ತರು ಒಮ್ಮತದಿಂದ ರಾಹುಲ್ ಗಾಂಧಿಯನ್ನು ನಾಯಕನನ್ನಾಗಿ ಬಯಸುತ್ತಾರೆ" ಎಂದು ಕೆಸಿ ವೇಣುಗೋಪಾಲ್ ಹೇಳಿದರು.
ಇದನ್ನೂ ಓದಿ: CWC Meeting : ನಾನು ಪೂರ್ಣಾವಧಿಯ ಕಾಂಗ್ರೆಸ್ ಅಧ್ಯಕ್ಷೆ : ಸೋನಿಯಾ ಗಾಂಧಿ
'ಎಲ್ಲರೂ ಒಮ್ಮತದಿಂದ ಒಪ್ಪಿಕೊಂಡರು...ರಾಹುಲ್ ಗಾಂಧಿ ಆಗುತ್ತಾರೋ ಇಲ್ಲವೋ ಎಂಬುದು ಅವರಿಗೆ ಬಿಟ್ಟದ್ದು. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎಂಬುದು ಎಲ್ಲರ ಅಭಿಪ್ರಾಯ" ಎಂದು ಹಿರಿಯ ನಾಯಕಿ ಅಂಬಿಕಾ ಸೋನಿ ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದೆ.
ಮಾಜಿ ಕೇಂದ್ರ ಸಚಿವ ಮತ್ತು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಎಎನ್ಐಗೆ ಪ್ರತಿಕ್ರಿಯಿಸಿ "ಪಕ್ಷದ ಮುಖ್ಯಸ್ಥರಾಗಿ ರಾಹುಲ್ ಗಾಂಧಿಯವರ ಬಗ್ಗೆ ಮಾತುಕತೆ ನಡೆಸಲಾಯಿತು ಮತ್ತು ಎಲ್ಲರೂ ಅವರ ಹೆಸರನ್ನು ಎಲ್ಲರೂ ಒಮ್ಮತದಿಂದ ಹೇಳಿದರು"ಎಂದರು. ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರು ಈಗ ರಾಹುಲ್ ಗಾಂಧಿ ಅವರಿಗೆ ಪಕ್ಷದ ಉಸ್ತುವಾರಿ ವಹಿಸುವಂತೆ ಒತ್ತಾಯಿಸಿದರು ಎಂದು ವರದಿಯಾಗಿದೆ.ಮೂಲಗಳ ಪ್ರಕಾರ "ನಾನು ಪರಿಗಣಿಸುತ್ತೇನೆ ..." ಎಂದು ರಾಹುಲ್ ಗಾಂಧಿ ಉತ್ತರಿಸಿದ್ದಾರೆ ಎನ್ನಲಾಗಿದೆ.
ಎರಡು ವರ್ಷಗಳ ಹಿಂದೆ 2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ನಂತರ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದರು. ಅವರ ರಾಜೀನಾಮೆಯು ಪಕ್ಷವನ್ನು ನಾಯಕತ್ವ ಬಿಕ್ಕಟ್ಟಿಗೆ ತಳ್ಳಿತು,ಇದರಿಂದಾಗಿ ಅವರ ತಾಯಿ ಸೋನಿಯಾ ಗಾಂಧಿ (Sonia Gandhi) ಯನ್ನು ಹಂಗಾಮಿ ಮುಖ್ಯಸ್ಥರಾಗಿ ನೇಮಕವಾದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ