ಪಂಜಾಬ್ ಗೆ ನೂತನ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ

ಶುಕ್ರವಾರದಂದು ಪಂಜಾಬ್ ಗೆ ನೂತನ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಎಐಸಿಸಿ ನೇಮಕ ಮಾಡಿದೆ.

Written by - Zee Kannada News Desk | Last Updated : Oct 22, 2021, 07:24 PM IST
  • ಶುಕ್ರವಾರದಂದು ಪಂಜಾಬ್ ಗೆ ನೂತನ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಎಐಸಿಸಿ ನೇಮಕ ಮಾಡಿದೆ.
 ಪಂಜಾಬ್ ಗೆ ನೂತನ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ  title=

ನವದೆಹಲಿ: ಶುಕ್ರವಾರದಂದು ಪಂಜಾಬ್ ಗೆ ನೂತನ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಎಐಸಿಸಿ ನೇಮಕ ಮಾಡಿದೆ.

ಇದನ್ನೂ ಓದಿ: Punjab Politics Latest Update: ಪಂಜಾಬ್ ಕಾಂಗ್ರೆಸ್ ಗೆ ಬಿಗ್ ಶಾಕ್!, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಹರೀಶ್  ರಾವತ್ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಿದ ನಂತರ ಈ ನಿರ್ಧಾರ ಬಂದಿದೆ.

ಇದನ್ನೂ ಓದಿ: Punjab crisis: ಹದಿನೈದು ದಿನಗಳಲ್ಲಿ ಹೊಸ ಪಕ್ಷಕ್ಕೆ ಚಾಲನೆ ನೀಡಲಿದ್ದಾರೆ ಅಮರಿಂದರ್ ಸಿಂಗ್..!

ಕಾಂಗ್ರೆಸ್ ಅಧ್ಯಕ್ಷರು ಹರೀಶ್ ಚೌಧರಿಯನ್ನು ಪಂಜಾಬ್ ಮತ್ತು ಚಂಡೀಗಡದ ಎಐಸಿಸಿ ಉಸ್ತುವಾರಿಯಾಗಿ ನೇಮಿಸಿದ್ದಾರೆ. ಹರೀಶ್ ರಾವತ್ ಅವರನ್ನು ಪಂಜಾಬ್ ಮತ್ತು ಚಂಡೀಗಡದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಅವರ ಪ್ರಸ್ತುತ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ'ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.ಆದಾಗ್ಯೂ, ರಾವತ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರಾಗಿ ಮುಂದುವರಿಯುತ್ತಾರೆ, ಇದು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿದೆ.

ಆಗಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Captain Amarinder Singh) ರ ತೀವ್ರ ವಿರೋಧದ ನಡುವೆಯೂ ನವಜೋತ್ ಸಿಂಗ್ ಸಿದ್ದು ಅವರನ್ನು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡುವಲ್ಲಿ ರಾವತ್ ಪ್ರಮುಖ ಪಾತ್ರ ವಹಿಸಿದ್ದರು.ನಂತರ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ಅಮರೀಂದರ್ ಸಿಂಗ್ ಅವರನ್ನು ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News