ಹಾವೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ದ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ 17 ಲಕ್ಷ ಮನೆಗಳನ್ನು ನಿರ್ಮಿಸಿ ಕೊಟ್ಟಿರುವುದಾಗಿ ಸಿದ್ದರಾಮಯ್ಯ, ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
"ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿದ್ದಾಗ 17 ಲಕ್ಷ ಮನೆಗಳನ್ನು ನೀಡಿದ್ದಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅವರು ಕೇವಲ 15 ಲಕ್ಷ ಮನೆಗಳನ್ನು ಬರೀ ಕಾಗದದಲ್ಲಿ ಮಂಜೂರು ಮಾಡಿದ್ದರು. ಮಂಜೂರು ಮಾಡಿದ ಮನೆಗಳಿಗೆ ಹಣವನ್ನು ಬಿಡುಗಡೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಸ್ವಯಂ ಸೇವಾ ಸಂಸ್ಥೆಗಳಿಂದ ವಸತಿ ರಹಿತ ತರಬೇತಿ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ
ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ (Hanagal by election) ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. "ಚುನಾವಣೆಗೆ ಮೂರು ತಿಂಗಳು ಮುಂಚಿತವಾಗಿ 15 ಲಕ್ಷ ಮನೆಗಳನ್ನು ಮಂಜೂರು ಮಾಡುವುದು ದೊಡ್ಡ ಸಾಧನೆಯಲ್ಲ. ಅವರು ತಮ್ಮ ಅಧಿಕಾರಾವಧಿಯ ಆರಂಭದಲ್ಲಿ ಅದನ್ನು ಮಂಜೂರು ಮಾಡಿ ಪೂರ್ಣಗೊಳಿಸಿದ್ದರೆ ಅದು ಒಂದು ಸಾಧನೆಯಾಗಿರುತ್ತಿತ್ತು. ಈಗ ಸಿದ್ದರಾಮಯ್ಯ ತಪ್ಪು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ" ಎಂದು ಬೊಮ್ಮಾಯಿ (Bommai) ಹೇಳಿದ್ದಾರೆ.
ತಾನು ಅಧಿಕಾರ ವಹಿಸಿಕೊಂಡ ನಂತರ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಲಕ್ಷ ಮತ್ತು ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಈಗ ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಸಿಹಿ ಸುದ್ದಿ : ಶೀಘ್ರದಲ್ಲಿ ಪಿಂಚಣಿ ಹೆಚ್ಚಳ ಸಾಧ್ಯತೆ!
ಅಲ್ಲದೆ, ಹಾನಗಲ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ (Election Rally), ಮಾತನಾಡಿದ ಬೊಮ್ಮಾಯಿ, ಕೇಂದ್ರವು ನೀಡಿದ ಸಬ್ಸಿಡಿಯಿಂದಾಗಿ ಅನ್ನ ಭಾಗ್ಯ' ಯೋಜನೆಯಡಿ ಅಕ್ಕಿ ನೀಡುವುದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಅಲ್ಲ ಸಬ್ಸಿಡಿ ದರದಲ್ಲಿ ಅಕ್ಕಿ ನೀಡುವ ಕಾರ್ಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಅದರಲ್ಲಿ ಹೊಸದೇನೂ ಇಲ್ಲ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಹಾನಗಲ್ ಅಭಿವೃದ್ಧಿಯ ವಿಷಯದ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಬರುವಂತೆ ಸಿದ್ದರಾಮಯ್ಯ ಬಸವರಾಜ್ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ. ಅಲ್ಲದೆ, ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯವನ್ನು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ