ನವದೆಹಲಿ: ಕ್ರೂಸ್ ಶಿಪ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿರುವ ಚಲನಚಿತ್ರ ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಬಂಧನದ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಶನಿವಾರ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ-UP Elections 2022: ಪ್ರಿಯಾಂಕಾ ಗಾಂಧಿಯಾ 'ಏಳು ಪ್ರತಿಜ್ಞೆಗಳು' ಯಾವುವು ಗೊತ್ತಾ?
ಒಂದು ವೇಳೆ ಶಾರುಖ್ ಖಾನ್ ಬಿಜೆಪಿಗೆ ಸೇರಿದರೆ "ಡ್ರಗ್ಸ್ ಶುಗರ್ ಪೌಡರ್ ಆಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.ಗುಜರಾತ್ನ ಮುಂದ್ರಾ ಬಂದರಿನಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ, ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು, ಕೇಂದ್ರೀಯ ಸಂಸ್ಥೆಯಾದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ-RBI Guidelines: ತಪ್ಪಾದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆಯೇ? ಚಿಂತೆಬಿಡಿ, ಈ ರೀತಿ ಮರಳಿ ಪಡೆಯಿರಿ
ಸಮತಾ ಪರಿಷತ್-ಎನ್ಸಿಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಭುಜಬಲ್, ಮಹಾರಾಷ್ಟ್ರ ಸರ್ಕಾರವು ಒಬಿಸಿ ಕೋಟಾದಲ್ಲಿ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ, ಆದರೆ ಬಿಜೆಪಿ ಕಾರ್ಯಕಾರಿಯೊಬ್ಬರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ ಎಂದು ಹೇಳಿದರು.
ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸುತ್ತಿದೆಯೇ? ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ-ಫೈಜಾಬಾದ್ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯೆ ಕ್ಯಾಂಟ್ ಎಂದು ಮರುನಾಮಕರಣ ಮಾಡಿದ ಸಿಎಂ ಯೋಗಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ