ಬೆಂಗಳೂರು: ಇಂದು ಬೆಳಿಗ್ಗೆ ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ವಿಧಿವಶ ರಾಗಿದ್ದಾರೆ.
ಇಂದು ಬೆಳಿಗ್ಗೆ ಎದೆನೋವಿನಿಂದಾಗಿ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದ ಹಿನ್ನಲೆಯಲ್ಲಿ ಅವರನ್ನು ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು.