ಧಾರವಾಡ: ಧಾರವಾಡ ಕ್ಷೇತ್ರದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಮತದಾನದ ಸಿಬ್ಬಂದಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ಮತ ಚಲಾಯಿಸುವಂತೆ ಒತ್ತಾಯಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಘಟನೆಯು ಧಾರವಾಡ ಜಿಲ್ಲೆಯ ಕರಡಿಗುಡ್ಡ ಗ್ರಾಮದಲ್ಲಿ ಬೂತ್ ಸಂಖ್ಯೆ 58 ರಲ್ಲಿ ನಡೆದಿದೆ. ಈ ವಿಷಯ ತಿಳಿದ ತಕ್ಷಣ ಚುನಾವಣಾ ಆಯೋಗದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರೀಕ್ಷೆ ನಡೆಸಿದರು.
ವಿನಯ್ ಕುಲಕರ್ಣಿಯು ಪ್ರಮುಖ ಲಿಂಗಾಯತ ಸಮುದಾಯದ ನಾಯಕನಾಗಿದ್ದು ಪ್ರಸ್ತುತ ಧಾರವಾಡದ ಶಾಸಕರಾಗಿದ್ದಾರೆ ಮತ್ತೆ ಇದೇ ಕ್ಷೇತ್ರದಿಂದ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಮಾಜಿ ಶಾಸಕ ಅಯ್ಯಪ್ಪ ದೇಸಾಯಿ ಅವರ ಪುತ್ರ ಅಮೃತ್ ದೇಸಾಯಿ ಅವರ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದಾರೆ.ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ದೇಸಾಯಿ ಪರಾಭವಗೊಂಡಿದ್ದರು.