ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ.50% ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2021ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

Last Updated : Oct 30, 2021, 11:25 PM IST
  • ಕನ್ನಡ ರಾಜ್ಯೋತ್ಸವದ ಅಂಗವಾಗಿ 2021ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ.50% ರಿಯಾಯಿತಿ title=
file photo

ಧಾರವಾಡ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2021ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಇದನ್ನೂ ಓದಿ: ಚಿರನಿದ್ರೆಗೆ ಜಾರಿದ ‘ದೊಡ್ಮನೆ ಹುಡುಗ’: ಅಂತಿಮ ದರ್ಶನಕ್ಕೆ ಜನಸಾಗರ, ಕಣ್ಣೀರಿಡುತ್ತಿರುವ ಅಭಿಮಾನಿಗಳು

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯವಿದೆ. ಪ್ರಾಧಿಕಾರದ ವೆಬ್ಸೈಟ್ www.kannadapustakapradhikara.comದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ಪಾವತಿಸಿ  ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಇದನ್ನೂ ಓದಿ: Puneeth Rajkumar: ಭಾನುವಾರದಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ.ಇವುಗಳಲ್ಲಿ ವ್ಯಕ್ತಿ ಚಿತ್ರಗಳು,ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ,ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News