ಬೆಂಗಳೂರು : ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka By Election) ಫಲಿತಾಂಶ ಹೊರಬಿದ್ದಿದೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ ಗೆಲುವಿನ ನಗೆ ಬೀರಿದರೆ, ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ (srinivas mane) ಜಯಭೇರಿ ಬಾರಿಸಿದ್ದಾರೆ. ಮುಂಜಾನೆ ಮತ ಎಣಿಕೆ ಆರಂಭವಾದ ಕ್ಷಣದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದರು.
ಈ ಮಧ್ಯೆ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಶ್ರೀನಿವಾಸ್ ಮಾನೆ ಅವರಿಗೆ ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಶ್ರೀನಿವಾಸ್ ಮಾನೆ, ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಹಾನಗಲ್ ಕ್ಷೇತ್ರದ (Hanagal by election) ಸ್ವಾಭಿಮಾನಿ ಜನ ತಮಗೆ ಮತ ನೀಡಿದ್ದು, ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ : Karnataka Assembly Bypolls Results : ಸಿಂದಗಿಯಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ
ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿವಾಸದಲ್ಲಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸುತ್ತಿರುವ ಕಾರ್ಯಕರ್ತರು , ಸಿದ್ದಾರಾಮಯ್ಯ ಮತ್ತು ಶ್ರೀನಿವಾಸ್ ಮಾನೆಗೆ ಜೈಕಾರ ಹಾಕುತ್ತಿದ್ದಾರೆ.
ಇದೇ ವೇಳೆ, ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) , ಉಪಚುನಾವಣೆಯ ಈ ರೀತಿಯ ಫಲಿತಾಂಶವನ್ನು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ಅಲ್ಲದೆ, 2023ರ ಚುನಾವಣೆಯ ಮೇಲೆ ಮುಂದಿನ ಗುರಿ ಇಟ್ಟಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ಧಾರವಾಡವು ಕರ್ನಾಟಕ ಏಕೀಕರಣ ಚಳುವಳಿಯ ಜನ್ಮಭೂಮಿ-ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಹಾನಗಲ್ನಲ್ಲಿ ಬಿಜೆಪಿಯಿಂದ (BJP) ವಿಧಾನಪರಿಷತ್ ಮಾಜಿ ಸದಸ್ಯಶಿವರಾಜ ಶರಣಪ್ಪ ಸಜ್ಜನರ್, ಕಾಂಗ್ರೆಸ್ನಿಂದ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
.