ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈನ ವಿಶೇಷ ರಜಾ ನ್ಯಾಯಾಲಯ ಶನಿವಾರದಂದು14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ), ಅವರನ್ನು ಇನ್ನೂ ಒಂಬತ್ತು ದಿನಗಳ ಕಾಲ ಕಸ್ಟಡಿಗೆ ಕೋರಿತು, ಆದರೆ ನ್ಯಾಯಾಲಯವು ತನಿಖಾ ಸಂಸ್ಥೆಯ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.
ಇದನ್ನೂ ಓದಿ: Anil Deshmukh In ED Custody: ನವೆಂಬರ್ 6ರವರೆಗೆ ED ವಶಕ್ಕೆ Anil Deshmukh
ದೇಶಮುಖ್ ಅವರನ್ನು 12 ಗಂಟೆಗಳ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ಇಡಿ ಬಂಧಿಸಿದೆ.ನ್ಯಾಯಾಲಯವು ಮಂಗಳವಾರ ಅವರನ್ನು ನವೆಂಬರ್ 6 ರವರೆಗೆ ಏಜೆನ್ಸಿಯ ವಶಕ್ಕೆ ನೀಡಿತ್ತು.ಇಡಿ ಕಸ್ಟಡಿ ಅಂತ್ಯಗೊಂಡ ನಂತರ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಇದನ್ನೂ ಓದಿ: ನೂರು ಕೋಟಿ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ
ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮಾಡಿದ ಕನಿಷ್ಠ 100 ಕೋಟಿ ರೂಪಾಯಿಗಳ ಲಂಚದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದಾಖಲಿಸಿದ ನಂತರ ದೇಶಮುಖ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಲಾಗಿದೆ.ಇದಲ್ಲದೆ, ಭ್ರಷ್ಟಾಚಾರ ಮತ್ತು ಅಧಿಕೃತ ಸ್ಥಾನದ ದುರುಪಯೋಗದ ಆರೋಪದ ಮೇಲೆ ಎನ್ಸಿಪಿ ನಾಯಕನ ವಿರುದ್ಧ ಸಿಬಿಐ ಏಪ್ರಿಲ್ 21 ರಂದು ಎಫ್ಐಆರ್ ದಾಖಲಿಸಿದ ನಂತರ ದೇಶ್ಮುಖ್ ಮತ್ತು ಅವರ ಸಹಚರರ ವಿರುದ್ಧ ಇಡಿ ತನಿಖೆಯನ್ನು ಪ್ರಾರಂಭಿಸಿತು.
ದೇಶ್ಮುಖ್ ಅವರು ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿರುವ ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎನ್ನುವ ವಿಚಾರವಾಗಿ ಇಡಿ ಅವರ ಮೇಲೆ ಪ್ರಕರಣ ದಾಖಲಿಸಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ್ಮುಖ್ ಅವರಲ್ಲದೆ, ಇಡಿ ಅವರ ಇಬ್ಬರು ಸಹಾಯಕರಾದ ಕುಂದನ್ ಶಿಂಧೆ ಮತ್ತು ಸಂಜೀವ್ ಪಲಾಂಡೆ ಅವರನ್ನು ಬಂಧಿಸಿದೆ. ಸದ್ಯ ಇವರಿಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ-ಪಡಿತರಾದಾರರಿಗೆ ಬಿಗ್ ಶಾಕ್ : ಇಂದಿನಿಂದ ಉಚಿತ ಪಡಿತರ ಯೋಜನೆ ಬಂದ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ