ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ T20 XI ಕ್ರಿಕೆಟ್ ತಂಡದಲ್ಲಿ ಕೊಹ್ಲಿಗಿಲ್ಲ ಸ್ಥಾನ..!

ಭಾರತದ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರು ಭಾನುವಾರ ಟ್ವಿಟ್ಟರ್‌ನಲ್ಲಿ ತಮ್ಮ ಸಾರ್ವಕಾಲಿಕ T20 XI ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಅವರನ್ನು ಕೈಬಿಟ್ಟಿದ್ದಾರೆ.

Written by - Zee Kannada News Desk | Last Updated : Nov 7, 2021, 06:02 PM IST
  • ಭಾರತದ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರು ಭಾನುವಾರ ಟ್ವಿಟ್ಟರ್‌ನಲ್ಲಿ ತಮ್ಮ ಸಾರ್ವಕಾಲಿಕ T20 XI ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಅವರನ್ನು ಕೈಬಿಟ್ಟಿದ್ದಾರೆ.
ಹರ್ಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ T20 XI ಕ್ರಿಕೆಟ್ ತಂಡದಲ್ಲಿ ಕೊಹ್ಲಿಗಿಲ್ಲ ಸ್ಥಾನ..! title=
file photo

ನವದೆಹಲಿ: ಭಾರತದ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರು ಭಾನುವಾರ ಟ್ವಿಟ್ಟರ್‌ನಲ್ಲಿ ತಮ್ಮ ಸಾರ್ವಕಾಲಿಕ T20 XI ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಅವರನ್ನು ಕೈಬಿಟ್ಟಿದ್ದಾರೆ.

ಈ ತಂಡದಲ್ಲಿ ಆರಂಭಿಕರಾಗಿ ಭಾರತದ ರೋಹಿತ್ ಶರ್ಮಾ ಮತ್ತು ವೆಸ್ಟ್ ಇಂಡೀಸ್ ಶ್ರೇಷ್ಠ ಕ್ರಿಸ್ ಗೇಲ್, ಇಂಗ್ಲೆಂಡ್ ವಿಕೆಟ್ ಕೀಪರ್-ಬ್ಯಾಟರ್ ಜೋಸ್ ಬಟ್ಲರ್ ಮತ್ತು ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್ ಶೇನ್ ವ್ಯಾಟ್ಸನ್ ಅವರಿದ್ದಾರೆ.ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ 5ನೇ ಸ್ಥಾನದಲ್ಲಿದ್ದು, ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ನಂತರದ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ಮೂವರು ಡ್ವೇನ್ ಬ್ರಾವೋ, ಕೀರಾನ್ ಪೊಲಾರ್ಡ್ ಮತ್ತು ಸುನಿಲ್ ನರೈನ್, ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಭಜ್ಜಿ  (Harbhajan Singh) ಅವರ ಸಾರ್ವಕಾಲಿಕ ಶ್ರೇಷ್ಠ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಹರ್ಭಜನ್ ಸಿಂಗ್ ಗೆ Mr. I Know It All ಎಂದ ಅಖ್ತರ್...! ಭಜ್ಜಿ ನೀಡಿದ ಉತ್ತರ ಏನಿತ್ತು ಗೊತ್ತೇ ?

"ಎಂಎಸ್ ಧೋನಿ ನಾಯಕ ಮಾತ್ರವಲ್ಲದೆ ವಿಕೆಟ್ ಕೀಪರ್ ಕೂಡ ಆಗಿರುತ್ತಾರೆ. ಈ ತಂಡದಲ್ಲಿ ನನ್ನ ಕೀಪರ್ ಆಗಿ ಜೋಸ್ ಬಟ್ಲರ್ ಕೂಡ ಇದ್ದಾರೆ, ಆದರೆ ಎಂಎಸ್ ಧೋನಿ ಅವರನ್ನು ವಿಕೆಟ್ ಕೀಪಿಂಗ್ ಮಾಡಲು ನಾನು ಬಯಸುತ್ತೇನೆ" ಎಂದು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Cricketers : ಈ ಸ್ಟಾರ್ ಕ್ರಿಕೆಟಿಗರು ತಮ್ಮ ಪತ್ನಿಯರಿಗೆ 'ಪ್ರಪೋಸ್' ಮಾಡಿದ್ದು ಹೇಗೆ? ಇಲ್ಲಿದೆ ಇಂಟರಸ್ಟಿಂಗ್ ಸ್ಟೋರಿಗಳು!

ಪ್ರಸ್ತುತ ಟಿ20 ವಿಶ್ವಕಪ್ ಬಳಿಕ ಭಾರತದ ಟಿ20ಐ ನಾಯಕತ್ವ ತ್ಯಜಿಸಲಿರುವ ಕೊಹ್ಲಿ, ಒಟ್ಟು 3,227 ರನ್ ಗಳಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಅವರು 52.04 ರ ಅದ್ಭುತ ಸರಾಸರಿಯಲ್ಲಿ ಈ ರನ್ಗಳನ್ನು ಗಳಿಸಿದ್ದಾರೆ.ಟಿ20 ವಿಶ್ವಕಪ್‌ನ 2014 ಮತ್ತು 2016 ಎರಡೂ ಆವೃತ್ತಿಗಳಲ್ಲಿ ಅವರು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಇದನ್ನೂ ಓದಿ:Cricketers : ಈ ಸ್ಟಾರ್ ಕ್ರಿಕೆಟಿಗರು ತಮ್ಮ ಪತ್ನಿಯರಿಗೆ 'ಪ್ರಪೋಸ್' ಮಾಡಿದ್ದು ಹೇಗೆ? ಇಲ್ಲಿದೆ ಇಂಟರಸ್ಟಿಂಗ್ ಸ್ಟೋರಿಗಳು!

ಐಪಿಎಲ್‌ನಲ್ಲಿ ಭಾರತದ T20I ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎರಡರಿಂದಲೂ ನಾಯಕತ್ವ ತ್ಯಜಿಸುವ ನಿರ್ಧಾರವನ್ನು ಕೊಹ್ಲಿ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಿದರು.ಅವರ ಕೆಲಸದ ಹೊರೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೊಹ್ಲಿ ಆ ಸಮಯದಲ್ಲಿ ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News