ಬಿಜೆಪಿ ಸರ್ಕಾರದಲ್ಲಿ ಮೇಕದಾಟು ಯೋಜನೆ ಆರಂಭಿಸುವ ಇಚ್ಛಾಶಕ್ತಿ ಕಾಣುತ್ತಿಲ್ಲ: ಡಿ.ಕೆ.ಶಿವಕುಮಾರ್

ಮೇಕೆದಾಟು ಅಣೆಕಟ್ಟು ಯೋಜನೆ ಕಾಮಗಾರಿ ತಕ್ಷಣ ಆರಂಭಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಡಿಸೆಂಬರ್ ಮೊದಲ ವಾರ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು.

Written by - Zee Kannada News Desk | Last Updated : Nov 8, 2021, 03:03 PM IST
  • ಕೇಂದ್ರ-ರಾಜ್ಯ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆ ಆರಂಭಿಸಲು ಬದ್ಧತೆ ಪ್ರದರ್ಶಿಸುತ್ತಿಲ್ಲ
  • ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ
  • ಮೇಕೆದಾಟು ಅಣೆಕಟ್ಟು ನಮ್ಮ ಹಣ, ಭೂಮಿ, ನೀರನ್ನು ಬಳಸಿಕೊಳ್ಳುವ ಯೋಜನೆ ಎಂದ ಡಿಕೆಶಿ
ಬಿಜೆಪಿ ಸರ್ಕಾರದಲ್ಲಿ ಮೇಕದಾಟು ಯೋಜನೆ ಆರಂಭಿಸುವ ಇಚ್ಛಾಶಕ್ತಿ ಕಾಣುತ್ತಿಲ್ಲ: ಡಿ.ಕೆ.ಶಿವಕುಮಾರ್ title=
ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಮೇಕದಾಟು ಯೋಜನೆ ಆರಂಭಿಸುವ ಇಚ್ಛಾಶಕ್ತಿ ಬಿಜೆಪಿ ಸರ್ಕಾರ(BJP Government)ದಲ್ಲಿ ಕಾಣುತ್ತಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸುತ್ತಿಲ್ಲವೆಂದು ಕಿಡಿಕಾರಿದ್ದಾರೆ.

ಕೇಂದ್ರ-ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರ್ಕಾರಗಳು ಮೇಕೆದಾಟು ಯೋಜನೆ(Mekedatu Project)ಆರಂಭಿಸಲು ಕಾನೂನಿನ ಯಾವುದೇ ಅಡೆತಡೆ ಇಲ್ಲ. ಆದರೂ ಈ ಎರಡೂ ಸರ್ಕಾರಗಳು ಬದ್ಧತೆ ಪ್ರದರ್ಶಿಸುತ್ತಿಲ್ಲ. ಇದರಿಂದ ನ್ಯಾಯಾಧೀಕರಣ ಮತ್ತು ಪ್ರಾಧಿಕಾರದ ಆದೇಶದ ಅನ್ವಯ ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಶೀಘ್ರದಲ್ಲೇ ಕಾಂಗ್ರೆಸ್ ನಿಂದ ಪಾದಯಾತ್ರೆ -ಸಿದ್ಧರಾಮಯ್ಯ

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮೇಕೆದಾಟು ಯೋಜನೆ(Mekedatu Project) ಜಾರಿಗೆ ಸರ್ವರೀತಿಯ ಪ್ರಯತ್ನ ಮಾಡಲಾಗಿತ್ತು. ಯೋಜನೆ ಜಾರಿ ಬಗ್ಗೆ ಸಂಪೂರ್ಣ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಕೇಂದ್ರವೂ ಕೂಡ ಯೋಜನೆ ಜಾರಿ ಬಗ್ಗೆ ಭರವಸೆ ವ್ಯಕ್ತಪಡಿಸಿತ್ತು. ಆದರೆ ಈಗ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಕೂಡ ಪ್ರಯೋಜನವಾಗುತ್ತಿಲ್ಲ. ಬಿಜೆಪಿ ನಾಯಕರು ಯೋಜನೆ ಜಾರಿಗೆ ಪ್ರಯತ್ನ ಮಾಡುತಿಲ್ಲವೆಂದು ಡಿಕೆಶಿ ದೂರಿದ್ದಾರೆ.

ಮೇಕೆದಾಟು ಅಣೆಕಟ್ಟು ನಮ್ಮ ಹಣ, ಭೂಮಿ, ನೀರನ್ನು ಬಳಸಿಕೊಳ್ಳುವ ಯೋಜನೆ. ಬೇರೆ ಯಾರದೇ ಅನುಮತಿ ಅಗತ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವೇ ಹೇಳಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಯೋಜನೆ ಜಾರಿಗೆ ಯಾರ ಅನುಮತಿಯೂ ಬೇಕಾಗಿಲ್ಲ, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ ಎಂದಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಸರಿಯಾದ ಬದ್ಧತೆ ಪ್ರದರ್ಶಿಸುತ್ತಿಲ್ಲವೆಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಭಾವಿಗಳ ಕುಟಿಲ ಕೂಟ: ಬಿಜೆಪಿ ಆಕ್ರೋಶ

ಮೇಕೆದಾಟು ಅಣೆಕಟ್ಟು ಯೋಜನೆ ಕಾಮಗಾರಿ ತಕ್ಷಣ ಆರಂಭಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ(Congress Party)ದ ವತಿಯಿಂದ ಡಿಸೆಂಬರ್ ಮೊದಲ ವಾರ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು. ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಭಾಗದ ಜನರು ಈ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News