ಬೆಂಗಳೂರು: ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟೋಗಲ್ಲ. ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲವೆಂದು ಬಿಜೆಪಿ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಎಲ್ಲರೂ ಸಮಾನವಾಗಿರಬೇಕು, ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು, ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು ಎಂಬ ನನ್ನ ನಿಲುವಿಗೆ ನಾನು ಈಗಲೂ ಬದ್ಧ’ವೆಂದು ಹೇಳಿದ್ದಾರೆ.
‘ಬಿಜೆಪಿ(BJP)ಯವರಂತಹ ಜಾತಿವಾದಿಗಳು ಬೇರಾರು ಇಲ್ಲ, ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಸ್ವಾರ್ಥಕ್ಕಾಗಿ ಹಲವರು ಹೋಗ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದೆ. ಆದರೆ ಬಿಜೆಪಿ ನಾಯಕರು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟೋಗಲ್ಲ.
ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ.ಎಲ್ಲರೂ ಸಮಾನವಾಗಿರಬೇಕು, ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು, ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು ಎಂಬ ನನ್ನ ನಿಲುವಿಗೆ ನಾನು ಈಗಲೂ ಬದ್ಧ. 2/5#socialjustice
— Siddaramaiah (@siddaramaiah) November 8, 2021
ಇದನ್ನೂ ಓದಿ: ಬಿಜೆಪಿ ಸರ್ಕಾರದಲ್ಲಿ ಮೇಕದಾಟು ಯೋಜನೆ ಆರಂಭಿಸುವ ಇಚ್ಛಾಶಕ್ತಿ ಕಾಣುತ್ತಿಲ್ಲ: ಡಿ.ಕೆ.ಶಿವಕುಮಾರ್
ಸಮಾಜದಲ್ಲಿ ಜಾತಿ ವಿಷಬೀಜ ಬಿತ್ತುವ ಕೊಳಕು ಮನಸ್ಸಿನವರಿಗೆ ಮಾತ್ರ ನಾನು ಜಾತಿವಾದಿಯಂತೆ ಕಾಣುವುದು.
ನನ್ನನ್ನು ಜಾತಿವಾದಿ ಎನ್ನುವವರು ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಸಾಲಮನ್ನಾ ಮುಂತಾದ ಯೋಜನೆಗಳ ಫಲಾನುಭವಿಗಳ ಬಳಿ ಸಿದ್ದರಾಮಯ್ಯ ಜಾತಿವಾದಿಯೇ ಎಂದು ಕೇಳಿ. 5/5#socialjustice— Siddaramaiah (@siddaramaiah) November 8, 2021
‘ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೆಲವರು ಕೇಳ್ತಾರೆ. ಒಂದು ಜಾತಿಯಲ್ಲಿ ಮಾತ್ರ ಬಡವರಿದ್ದಾರಾ? ಮುಖ್ಯಮಂತ್ರಿಯಾಗಿ ಒಂದು ಸಮಾಜದ ಅಭಿವೃದ್ಧಿ ಮಾತ್ರ ಬಯಸುವುದು ಸರಿಯೇ? ಹೀಗಾಗಿ ಅವಕಾಶದಿಂದ ವಂಚಿತರಾದ ಎಲ್ಲ ಜನರ ಪರ ನಾನು ಕೆಲಸ ಮಾಡಿದ್ದೇನೆ. ಕೆಂಪೇಗೌಡರು, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರಥ, ಕೃಷ್ಣ, ವೇಮನ ಮತ್ತಿತರರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಜಾತಿ, ಧರ್ಮಗಳನ್ನು ಮೀರಿ ಸಾಧನೆಯನ್ನು ಮಾಡಿದವರ ಜಯಂತಿ ಆಚರಣೆಗೆ ಜಾತಿ ಏಕೆ? ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.
ಬಿಜೆಪಿಯವರಂತಹ ಜಾತಿವಾದಿಗಳು ಬೇರಾರು ಇಲ್ಲ, ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಸ್ವಾರ್ಥಕ್ಕಾಗಿ ಹಲವರು ಹೋಗ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದೆ.
ಆದರೆ @BJP4Karnataka ನಾಯಕರು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ. 1/5#socialjustice pic.twitter.com/eq01vEZaXW— Siddaramaiah (@siddaramaiah) November 8, 2021
‘ಸಮಾಜದಲ್ಲಿ ಜಾತಿ ವಿಷಬೀಜ ಬಿತ್ತುವ ಕೊಳಕು ಮನಸ್ಸಿನವರಿಗೆ ಮಾತ್ರ ನಾನು ಜಾತಿವಾದಿಯಂತೆ ಕಾಣುವುದು. ನನ್ನನ್ನು ಜಾತಿವಾದಿ ಎನ್ನುವವರು ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಸಾಲಮನ್ನಾ ಮುಂತಾದ ಯೋಜನೆಗಳ ಫಲಾನುಭವಿಗಳ ಬಳಿ ಸಿದ್ದರಾಮಯ್ಯ ಜಾತಿವಾದಿಯೇ ಎಂದು ಕೇಳಿ’ ಎಂದು ಬಿಜೆಪಿ(BJP Karnataka)ಗೆ ಕುಟುಕಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಭಾವಿಗಳ ಕುಟಿಲ ಕೂಟ: ಬಿಜೆಪಿ ಆಕ್ರೋಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ