Virat Kohli : ಶೀಘ್ರದಲ್ಲೇ ಟಿ20 ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ!

ಪ್ರಸಕ್ತ ಐಸಿಸಿ ಟೂರ್ನಿಯ ಬಳಿಕ ಭಾರತ ತಂಡದ ನಾಯಕತ್ವವನ್ನು 'ಕಿಂಗ್ ಕೊಹ್ಲಿ'(Virat Kohli) ತೊರೆದಿದ್ದಾರೆ. ಅನೇಕ ಹಿರಿಯ ಕ್ರಿಕೆಟಿಗರು ಇದು ಸರಿ ಎಂದು ಪರಿಗಣಿಸುತ್ತಿಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮುಷ್ತಾಕ್ ಅಹ್ಮದ್ ಬಿಗ್ ಹೇಳಿಕೆ ನೀಡಿದ್ದಾರೆ.

Written by - Channabasava A Kashinakunti | Last Updated : Nov 10, 2021, 07:39 PM IST
  • ಪಾಕಿಸ್ತಾನದ ಹಿರಿಯ ಕ್ರಿಕೆಟಿಗರ ಬಿಗ್ ಹೇಳಿಕೆ
  • ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ಸರಣಿಯಿಂದ ವಿಶ್ರಾಂತಿ
  • ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನ ನೂತನ ನಾಯಕರಾಗಿ ನೇಮಕ
Virat Kohli : ಶೀಘ್ರದಲ್ಲೇ ಟಿ20 ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ! title=

ನವದೆಹಲಿ : 2021ರ ಟಿ20 ವಿಶ್ವಕಪ್ ಟೀಂ ಇಂಡಿಯಾ ಪಾಲಿಗೆ ದುಃಸ್ವಪ್ನವಾಗಿ ಉಳಿಯಿತು. 'ವಿರಾಟ್ ಸೇನಾ' ಸೆಮಿಫೈನಲ್‌ಗೂ ತಲುಪಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಸಾಕಷ್ಟು ಟೀಕೆಗೆ ಗುರಿಯಾಗುತ್ತಿದ್ದಾರೆ. ಪ್ರಸಕ್ತ ಐಸಿಸಿ ಟೂರ್ನಿಯ ಬಳಿಕ ಭಾರತ ತಂಡದ ನಾಯಕತ್ವವನ್ನು 'ಕಿಂಗ್ ಕೊಹ್ಲಿ'(Virat Kohli) ತೊರೆದಿದ್ದಾರೆ. ಅನೇಕ ಹಿರಿಯ ಕ್ರಿಕೆಟಿಗರು ಇದು ಸರಿ ಎಂದು ಪರಿಗಣಿಸುತ್ತಿಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮುಷ್ತಾಕ್ ಅಹ್ಮದ್ ಬಿಗ್ ಹೇಳಿಕೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಶೀಘ್ರದಲ್ಲೇ ನಿವೃತ್ತಿ!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮುಷ್ತಾಕ್ ಅಹ್ಮದ್(Mushtaq Ahmed), 'ವಿರಾಟ್ ಕೊಹ್ಲಿ ಶೀಘ್ರದಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಅಂದಹಾಗೆ, ಅವರು ಐಪಿಎಲ್‌ನಲ್ಲಿ ತಮ್ಮ ಫ್ರಾಂಚೈಸಿ ತಂಡಕ್ಕಾಗಿ ಆಡುವುದನ್ನು ಮುಂದುವರಿಸುತ್ತಾರೆ. ಅವರು ಈ ಸ್ವರೂಪದಲ್ಲಿ ಮಾಡಬೇಕಾದ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಮತ್ತು ನಾಯಕತ್ವಕ್ಕಿಂತ ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅವರ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

ಇದನ್ನೂ ಓದಿ : T20 World Cup 2021, ENG vs NZ: ಇಂದು ಫೈನಲ್‌ಗಾಗಿ ಇಂಗ್ಲೆಂಡ್ VS ನ್ಯೂಜಿಲೆಂಡ್ ಕಾದಾಟ..!

ಟೀಮ್ ಇಂಡಿಯಾದಲ್ಲಿ ಎರಡು ಬಣಗಳಿವೆ

ಟೀಂ ಇಂಡಿಯಾ(Team India)ದಲ್ಲಿ ಎರಡು ಬಣಗಳಿವೆ ಎಂದು ಪಾಕಿಸ್ತಾನಿ ಕ್ರಿಕೆಟಿಗ ಮುಷ್ತಾಕ್ ಅಹ್ಮದ್ ಕೂಡ ಹೇಳಿಕೊಂಡಿದ್ದಾರೆ. 'ಯಶಸ್ವಿ ನಾಯಕನೊಬ್ಬ ನಾಯಕತ್ವ ತ್ಯಜಿಸಲು ಬಯಸುವುದಾಗಿ ಹೇಳಿದರೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂದರ್ಥ. ನಾನು ಇದೀಗ ಭಾರತೀಯ ಡ್ರೆಸ್ಸಿಂಗ್ ರೂಮ್‌ನಲ್ಲಿ ಎರಡು ಬಣಗಳನ್ನು ನೋಡುತ್ತೇನೆ, ಮುಂಬೈ ಮತ್ತು ದೆಹಲಿ ಬಣ. ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕತ್ವ ತೊರೆದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನ್ಯೂಜಿಲೆಂಡ್ ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ(Rohit Sharma) ಅವರನ್ನು ನೂತನ ನಾಯಕರನ್ನಾಗಿ ಮಾಡಲಾಗಿದೆ. ಕೆಎಲ್ ರಾಹುಲ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ : ಕೊನೆಯಾಗಲಿದೆಯೇ ಈ ನಾಲ್ಕು ಕ್ರಿಕೆಟಿಗರ ಟೆಸ್ಟ್ ಕರಿಯರ್ ?

ಭಾರತದ T20 ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(Rishabh Pant) (ಡಬ್ಲ್ಯುಕೆ), ಇಶಾನ್ ಕಿಶನ್ (ಡಬ್ಲ್ಯುಕೆ), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್ ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News