ನವದೆಹಲಿ: ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ, ಪೊಲೀಸರು ನಗರದಲ್ಲಿ ಕರ್ಪ್ಯೂ ವಿಧಿಸಿರುವುದಲ್ಲದೆ ಮೂರು ದಿನಗಳ ಕಾಲ ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಯಾವುದೇ ಅಹಿತಕರ ಘಟನೆಯ ನಡೆಯದಿರುವಂತೆ ನೋಡಿಕೊಳ್ಳಲು ಸಿಆರ್ಪಿಸಿ ಸೆಕ್ಷನ್ 144 (1), (2), (3),ಅಡಿಯಲ್ಲಿ ಪ್ರಭಾರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ.ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ,ಯಾವುದೇ ವ್ಯಕ್ತಿಯನ್ನು ಅವರ ಮನೆಗಳಿಂದ ಹೊರಗೆ ಬರಲು ಅನುಮತಿಸಲಾಗುವುದಿಲ್ಲ ಮತ್ತು ಐದು ಅಥವಾ ಹೆಚ್ಚಿನ ವ್ಯಕ್ತಿಗಳ ಸಭೆಯನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ವಿರುದ್ಧ ಇಡಿಯಿಂದ ಸಮನ್ಸ್ ಜಾರಿ
ಶನಿವಾರ ಬೆಳಗ್ಗೆ ಬಿಜೆಪಿ ಕರೆ ನೀಡಿದ್ದ ಬಂದ್ನಲ್ಲಿ ಹಿಂಸಾಚಾರ, ಕಲ್ಲು ತೂರಾಟ, ಹಲವು ವಾಹನಗಳಿಗೆ ಹಾನಿ, ಸಣ್ಣಪುಟ್ಟ ಬೆಂಕಿ ಹಚ್ಚುವ ಘಟನೆಗಳು ನಡೆದಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.ನಾಸಿಕ್, ಅಮರಾವತಿ ಮತ್ತು ನಾಂದೇಡ್ನಲ್ಲಿ ಶುಕ್ರವಾರ ರಾಜ್ಯಾದ್ಯಂತ ರಾಝಾ ಅಕಾಡೆಮಿ ಮತ್ತು ಇತರ ಮುಸ್ಲಿಂ ಸಂಘಟನೆಗಳು ನಡೆಸಿದ ಪ್ರತಿಭಟನೆಗಳು ಮತ್ತು ರ್ಯಾಲಿಗಳಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ವಿರೋಧಿಸಿ ಬಿಜೆಪಿ ಬಂದ್ಗೆ ಕರೆ ನೀಡಿತ್ತು.
ಅಕ್ಟೋಬರ್ 27 ರಂದು ತ್ರಿಪುರಾದ ಪಾಣಿಸಾಗರದಲ್ಲಿ ನಡೆದ ಹಿಂಸಾಚಾರದ ವಿರುದ್ಧ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಾಂದೇಡ್, ಮಾಲೆಗಾಂವ್ ಮತ್ತು ಅಮರಾವತಿಯಿಂದ ಶುಕ್ರವಾರ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ.
ಇದನ್ನೂ ಓದಿ: Gautam Gambhir: ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಭಾರತಕ್ಕೆ ಐಸಿಸಿ ಪ್ರಶಸ್ತಿ ಗೆಲ್ಲುತ್ತಾರೆ- ಗೌತಮ್ ಗಂಭೀರ್
'ನಾವು ಹಿಂಸಾಚಾರವನ್ನು ಖಂಡಿಸುತ್ತೇವೆ.ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡಲು ನಾನು ಅಮರಾವತಿ ಸಂಸದ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಟ್ಟುಕೊಂಡು ಶಾಂತಿಯನ್ನು ಹೇಗೆ ಕಾಪಾಡುವುದು ಎಂಬುದರ ಕುರಿತು ನಾವು ಗಮನಹರಿಸಿದ್ದೇವೆ" ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.