ಬೆಂಗಳೂರು: ಪದಾಧಿಕಾರಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ ಎಂದು ಕರ್ನಾಟಕ ಬಿಜೆಪಿ ಟೀಕಿಸಿದೆ. ಬುಧವಾರ #SidduVsDKS ಹ್ಯಾಶ್ ಟ್ಯಾಗ್ ಬಳಿಸಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
‘ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ(Karnataka MLC Election )ಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಒಳಜಗಳ ಬಯಲಾಗಿದೆ. ಅಭ್ಯರ್ಥಿ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳಿಂದಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೂರ ಉಳಿದಿದ್ದಾರೆ. ಏನಿದರರ್ಥ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಪದಾಧಿಕಾರಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲೂ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ.
ಆದರೆ ಪರಿಷತ್ ಚುನಾವಣೆ ವಿಚಾರದಲ್ಲಿ ಬೇಸರಗೊಂಡಿರುವ ಸಿದ್ದರಾಮಯ್ಯ ಅವರೀಗ ಬೇರೆಯದೇ ಲೆಕ್ಕಾಚಾರದಲ್ಲಿ ತೊಡಗಿದಂತೆ ಕಾಣುತ್ತಿದೆ.
ಸಿದ್ದರಾಮಯ್ಯನವರೇ, ನಿಮ್ಮ ಮೌನವು ಬೇರೇನೋ ಸೂಚಿಸುತ್ತಿರುವುದು ನಿಜವಲ್ಲವೇ?#SidduVsDKS
— BJP Karnataka (@BJP4Karnataka) November 24, 2021
ಇದನ್ನೂ ಓದಿ: Karnataka MLC Election: ‘ಕೈ’ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಡಿಕೆಶಿ ಸಂಬಂಧಿ, ಹೆಬ್ಬಾಳ್ಕರ್ ತಮ್ಮನಿಗೆ ಟಿಕೆಟ್!
‘ಸಿದ್ದರಾಮಯ್ಯ(Siddaramaiah) ಹಾಗೂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಎರಡು ಕಣ್ಣು ಇದ್ದಂತೆ ಎಂದು ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಅವರು ಇತ್ತೀಚೆಗೆ ಬಣ್ಣಿಸಿದ್ದರು. ಆದರೆ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆಯ ವೇಳೆ ಈ ಎರಡು ಕಣ್ಣುಗಳ ದೃಷ್ಟಿ ಸಾಮರ್ಥ್ಯ ಬಯಲಾಗಿದೆ. ಡಿಕೆಶಿ ನೀಡಿದ ಪಟ್ಟಿಯ ಬಗ್ಗೆ ಸಿದ್ದರಾಮಯ್ಯ ದಿವ್ಯ ಮೌನ ತಳೆದಿರುವುದೇಕೆ?’ ಎಂದು ಬಿಜೆಪಿ ಕುಟುಕಿದೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಕಾಂಗ್ರೆಸ್ ಪಕ್ಷದ ಎರಡು ಕಣ್ಣು ಇದ್ದಂತೆ ಎಂದು ಪರಮೇಶ್ವರ್ ಅವರು ಇತ್ತೀಚೆಗೆ ಬಣ್ಣಿಸಿದ್ದರು.
ಆದರೆ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆಯ ವೇಳೆ ಈ ಎರಡು ಕಣ್ಣುಗಳ ದೃಷ್ಟಿ ಸಾಮರ್ಥ್ಯ ಬಯಲಾಗಿದೆ.
ಡಿಕೆಶಿ ನೀಡಿದ ಪಟ್ಟಿಯ ಬಗ್ಗೆ ಸಿದ್ದರಾಮಯ್ಯ ದಿವ್ಯ ಮೌನ ತಳೆದಿರುವುದೇಕೆ?#SidduVsDKS
— BJP Karnataka (@BJP4Karnataka) November 24, 2021
‘ಪದಾಧಿಕಾರಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲೂ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ. ಆದರೆ ಪರಿಷತ್ ಚುನಾವಣೆ ವಿಚಾರದಲ್ಲಿ ಬೇಸರಗೊಂಡಿರುವ ಸಿದ್ದರಾಮಯ್ಯ ಅವರೀಗ ಬೇರೆಯದೇ ಲೆಕ್ಕಾಚಾರದಲ್ಲಿ ತೊಡಗಿದಂತೆ ಕಾಣುತ್ತಿದೆ. ಸಿದ್ದರಾಮಯ್ಯನವರೇ ನಿಮ್ಮ ಮೌನವು ಬೇರೇನೋ ಸೂಚಿಸುತ್ತಿರುವುದು ನಿಜವಲ್ಲವೇ?’ ಎಂದು ಬಿಜೆಪಿ ವ್ಯಂಗ್ಯವಾಗಿ ಪ್ರಶ್ನಿಸಿದೆ.
ಇದನ್ನೂ ಓದಿ: MLC ಚುನಾವಣೆ: ಬರೀ ಏಳು ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ ಜೆಡಿಎಸ್
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಒಳಜಗಳ ಬಯಲಾಗಿದೆ.
ಅಭ್ಯರ್ಥಿ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳಿಂದಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೂರ ಉಳಿದಿದ್ದಾರೆ.
ಏನಿದರರ್ಥ?#SidduVsDKS
— BJP Karnataka (@BJP4Karnataka) November 24, 2021
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರೇ ಸಿದ್ದರಾಮಯ್ಯ ಅವರ ಮೌನ ತುಂಬಾ ಅಪಾಯಕಾರಿ. ಮುನಿಸಿಕೊಂಡಾಗಲೆಲ್ಲ ಪ್ರಕೃತಿ ಚಿಕಿತ್ಸೆಗೆ ತೆರಳುತ್ತಾರೆ. ಅಲ್ಲಿಂದ ಪ್ರಯೋಗಿಸುವ ರಾಜಕೀಯ ದಾಳ ಯಾರ್ಯಾರ ಬುಡ ಅಲ್ಲಾಡಿಸಿದೆ ಎಂಬುದು ನಿಮಗೆ ನೆನಪಿರಬಹುದಲ್ಲವೇ? ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ’ ಎಂದು ಬಿಜೆಪಿ ಡಿಕೆಶಿಗೆ ಸಲಹೆ ನೀಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.