ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಸರ್ಕಾರವನ್ನು ವಜಾ ಮಾಡಲಿ: ಸಿದ್ದರಾಮಯ್ಯ

ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Nov 28, 2021, 01:15 PM IST
  • ರಾಜ್ಯ ಸರ್ಕಾರ ಶೇ.40 ರಷ್ಟು ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಪ್ರಧಾನಿಗೆ ಪತ್ರ ಬರೆಯಲಾಗಿದೆ
  • ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ
  • ಪರಿಷತ್ ಚುನಾವಣೆಯಲ್ಲೂ ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ ಎಂದ ಸಿದ್ದರಾಮಯ್ಯ
ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಸರ್ಕಾರವನ್ನು ವಜಾ ಮಾಡಲಿ: ಸಿದ್ದರಾಮಯ್ಯ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಾಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾ ಮಾಡಲಿ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯ ಸರ್ಕಾರ ಶೇ.40 ರಷ್ಟು ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ 1 ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಬಿಜೆಪಿ ಸರ್ಕಾರ(BJP Government)ವನ್ನು ವಜಾ ಮಾಡಲಿ’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಯುದ್ಧ ನಡೆಯುತ್ತಿದೆ: ಬಿಜೆಪಿ ಟೀಕೆ

‘ಕಾಂಗ್ರೆಸ್ ಸರ್ಕಾರ(Congress Government)ದ ಅವದಿಯಲ್ಲಿ ನಡೆದಿರುವ ಟೆಂಡರ್ ಗಳೂ ಸೇರಿ ಈವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಶೇ.40 ರಷ್ಟು ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ?’ ಅಂತಾ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರ ಸರ್ಕಾರ ಎಂದು ಹೇಳಿ ಬಿಜೆಪಿ ರೈತರಿಗೆ ಟೋಪಿ ಹಾಕುವ ಕೆಲಸ ಮಾಡಬಾರದು"-ಸಿದ್ಧರಾಮಯ್ಯ

‘ವಿಧಾನ ಪರಿಷತ್ತಿನ ಚುನಾವಣೆ(Karnataka MLC Election)ಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಆದರೆ ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News