Nirmala Sitharaman: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾರತದ ಅತ್ಯಂತ ಶಕ್ತಿಶಾಲಿ ಮಹಿಳೆ ಎನಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಫೋರ್ಬ್ಸ್ ನಿಯತಕಾಲಿಕವು ಭಾರತದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರಲ್ಲಿ (The World’s Most Powerful Women 2021) ಸೇರಿಸಿದೆ. ನಿರ್ಮಲಾ ಸೀತಾರಾಮನ್ ಈ ಪಟ್ಟಿಯಲ್ಲಿ 37ನೇ ಸ್ಥಾನ ಪಡೆದಿದ್ದಾರೆ. ಫೋರ್ಬ್ಸ್ ನಿರ್ಮಲಾ ಸೀತಾರಾಮನ್ ಅವರನ್ನು ಸತತ ಮೂರನೇ ಬಾರಿಗೆ 'ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ' ಪಟ್ಟಿಯಲ್ಲಿ ಸೇರಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಯುಎಸ್ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್ (Janet Yellen) ಅವರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಉತ್ತಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಫೋರ್ಬ್ಸ್ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನೈಕಾ ಸಂಸ್ಥಾಪಕ ಮತ್ತು ಸಿಇಒ ಫಲ್ಗುಣಿ ನಾಯರ್ (Falguni Nayar) ಸಹ ಸ್ಥಾನ ಪಡೆದಿದ್ದಾರೆ. ಗಮನಾರ್ಹವಾಗಿ, ಫಲ್ಗುಣಿ ನಾಯರ್ ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ತನ್ನ ಕಂಪನಿಯ ಅಬ್ಬರದ ನಂತರ ಭಾರತದ ಏಳನೇ ಮಹಿಳಾ ಬಿಲಿಯನೇರ್ ಆಗಿ ಹೊರ ಹೊಮ್ಮಿದ್ದಾರೆ.
ಇದನ್ನೂ ಓದಿ- RBI Monetary Policy Review: ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ- ಆರ್‌ಬಿಐ
ಎಚ್ ಸಿಎಲ್ ನ ರೋಶನಿ ನಾಡಾರ್ ಅವರಿಗೂ ಸ್ಥಾನ ಸಿಕ್ಕಿದೆ:
ಹಣಕಾಸು ಸಚಿವ ಸೀತಾರಾಮನ್ ಮತ್ತು ಫಲ್ಗುಣಿ ನಾಯರ್ (Falguni Nayar) ಅವರನ್ನು ಹೊರತುಪಡಿಸಿ, ಫೋರ್ಬ್ಸ್ ತನ್ನ ಪಟ್ಟಿಯಲ್ಲಿ (The World’s Most Powerful Women 2021) ಭಾರತದ ಇನ್ನೊಬ್ಬ ಮಹಿಳೆಯನ್ನು ಇರಿಸಿದೆ. ಎಚ್‌ಸಿಎಲ್ ಟೆಕ್ನಾಲಜೀಸ್ (HCL Technologies) ಅಧ್ಯಕ್ಷೆ ರೋಶನಿ ನಾಡಾರ್ ಪಟ್ಟಿಯಲ್ಲಿ 52ನೇ ಸ್ಥಾನ ಪಡೆದಿದ್ದಾರೆ. ನಾಡಾರ್ ಅವರು ದೇಶದ ಐಟಿ ಕಂಪನಿಯನ್ನು ಮುನ್ನಡೆಸುತ್ತಿರುವ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಇದರೊಂದಿಗೆ ಬಯೋಕಾನ್‌ನ ಸಂಸ್ಥಾಪಕಿ ಮತ್ತು ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಕೂಡ ಫೋರ್ಬ್ಸ್ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ, ಅವರು 72 ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ- Corona Vaccine:ಕೋವಿಶೀಲ್ಡ್ ಉತ್ಪಾದನೆಯನ್ನು 50% ರಷ್ಟು ಕಡಿತಗೊಳಿಸಲಾಗುವುದು: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ
ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆ:
ಮ್ಯಾಕೆಂಜಿ ಸ್ಕಾಟ್ (MacKenzie Scott) ಈ 'ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ' ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಸ್ಕಾಟ್ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ ಮತ್ತು ಅಮೆಜಾನ್ ಗ್ರೂಪ್ ಮಾಲೀಕ ಜೆಫ್ ಬೆಜೋಸ್ (Jeff Bezos) ಅವರ ಮಾಜಿ ಪತ್ನಿ. 2019 ರಲ್ಲಿ ಇಬ್ಬರೂ ವಿಚ್ಛೇದನ ಪಡೆದರು. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಭಾರತೀಯ ಮೂಲದ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಸ್ಥಾನ ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ