ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಬೆಳಗಾವಿ ಕ್ಷೇತ್ರದ ಫಲಿತಾಂಶದಿಂದ ಬಿಜೆಪಿ ಮತ್ತು ರಮೇಶ್ ಜಾರಕಿಹೊಳಿ(Ramesh Jarkiholi)ಗೆ ತೀವ್ರ ಮುಜುಗರವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಲಖನ್ ಜಾರಕಿಹೊಳಿ ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯ ಹೀನಾಯ ಸೋಲು ‘ಕಮಲ’ ಪಕ್ಷ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಒಳಗೊಳಗೆ ಭಿನ್ನಾಭಿಪ್ರಾಯಕ್ಕೆ ಕೂಡ ಕಾರಣವಾಗಿದೆ.
ಬೆಳಗಾವಿಯಲ್ಲಿ ಬಿಜೆಪಿ ಸೋಲು ಕಂಡಿರುವ ಬಗ್ಗೆ ಇಂದು ಗೋಕಾಕ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ(Siddaramaiah) ಒಬ್ಬ ವೇಸ್ಟ್ ಬಾಡಿ. ಅವರಿಗೆ ಭಯ ಹುಟ್ಟಿದ್ದು, ಹಿಂದುಳಿದವರ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾರೆ. ಕುರುಬರೆಲ್ಲರೂ ಸಿದ್ದರಾಮಯ್ಯರನ್ನು ತಿರಸ್ಕರಿಸಿದ್ದಾರೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ನಿಂತರೆ ಗ್ಯಾರೆಂಟಿ ಸೋಲುತ್ತಾರೆ. ನಮ್ಮ ಪಕ್ಷ ಸೋಲಬಾರದಿತ್ತು ಸೋತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: "ಕೊಡವ ಸಮುದಾಯಕ್ಕೆ ಹಿಂದುಳಿದ ವರ್ಗದ ಸ್ಥಾನಮಾನ ನೀಡಿ": ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
‘ನಮ್ಮ ಪಕ್ಷದಲ್ಲಿ ಏನಾಗಿದೆ ಎನಿಲ್ಲ ಎಂಬುದರ ಕುರಿತು ನಮ್ಮ ವರಿಷ್ಠರ ಜೊತೆಗೆ ಮಾತನಾಡಿದ್ದೇನೆ. ಪಕ್ಷ ಏಕೆ ಸೋತಿದೆ ಎಂಬುದನ್ನು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಬಗ್ಗೆ ಬಹಳ ಕಠೋರವಾಗಿ ಹೇಳುವವನಿದ್ದೆ. ಕೊನೆಯ ಮೂರ್ನಾಲ್ಕು ದಿನಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು. ಇಂದು ಬೆಳಗ್ಗೆ ಹಿರಿಯ ನಾಯಕರೊಬ್ಬರು ನನಗೆ ಕರೆ ಮಾಡಿದ್ದರು. ಹೀಗಾಗಿ ನಾನು ಡಿಕೆಶಿ ಬಗ್ಗೆ ಕಠೋರವಾಗಿ ಮಾತನಾಡುವುದಿಲ್ಲ. ಕೊನೆಯ 3 ದಿನ ಲಖನ್ ಜೊತೆಗೆ ಮಾತುಕತೆಯಾಗಿಲ್ಲ. ನಾನು ಬಿಜೆಪಿ ಶಾಸಕನಾಗಿ ಬಿಜೆಪಿ ಅಭ್ಯರ್ಥಿಯ ಪರವಾಗಿಯೇ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಹೋಗುವ ಕುರಿತು ಲಖನ್ ತೀರ್ಮಾನ ತೆಗೆದುಕೊಳ್ಳಬೇಕು’ ಅಂತಾ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯ ಸೋಲನ್ನು(Karnataka MLC Election) ರಮೇಶ್ ಜಾರಕಿಹೊಳಿ ತಲೆಗೆ ಕಟ್ಟುತ್ತಿದ್ದಾರೆಂಬ ಪ್ರಶ್ನೆ ಎದುರಾಗಿದೆ. ಗುಡ್ಡಕ್ಕೆ ಶಕ್ತಿ ಹೊರುವ ತಾಕತ್ತು ಇದೆ. ಸಂಚು ನಡೆದಿರುವ ಬಗ್ಗೆ ಇನ್ನು ಖಚಿತವಾಗಿಲ್ಲ, ಇದರ ಬಗ್ಗೆ ನಾನು ವಿಚಾರ ಮಾಡಿ ಮಾತನಾಡುತ್ತೇನೆ. ಲೀಡರ್ ಆದವರಿಗೆ ಸೋಲಿನ ಪಟ್ಟ ಕಟ್ಟುತ್ತಾರೆ. ನಾನು ಕಾಂಗ್ರೆಸ್(Congress) ಸೋಲಿಸುತ್ತೇನೆಂದು ಹಠಕ್ಕೆ ಬಿದ್ದಿದ್ದು ನಿಜ. ಇವತ್ತು ಅವರ ಪಕ್ಷ ಗೆದ್ದಿದೆ. ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿಕೆಶಿ ಹೇಳಿಕೆ ಬಗ್ಗೆ ಕಠೋರ ಉತ್ತರ ಕೊಡುತ್ತೇನೆ’ ಎಂದು ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಿರುದ್ಧ ಹೋರಾಟ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.