ಸಿಎಂ ಬೊಮ್ಮಾಯಿ, ಗೃಹ ಸಚಿವರು ಸೇರಿ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲು, ಕಾರಣ.?

Anti conversion bill: ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸ್ಪೀಕರ್ ಕಾಗೇರಿ ಹಾಗೂ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲಾಗಿದೆ. 

Edited by - Zee Kannada News Desk | Last Updated : Dec 27, 2021, 03:53 PM IST
  • ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021
  • ಮತಾಂತರ ತಡೆ ಮಸೂದೆ ಮಂಡಿಸಿದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು
  • ಗೃಹ ಸಚಿವ ಆರಗ ಜ್ಞಾನೇಂದ್ರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲು
ಸಿಎಂ ಬೊಮ್ಮಾಯಿ, ಗೃಹ ಸಚಿವರು ಸೇರಿ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು ದಾಖಲು, ಕಾರಣ.? title=
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮತಾಂತರ ತಡೆ ಮಸೂದೆ (Anti conversion bill) ಎಂದು ಕರೆಯಲಾಗುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021 ಮಂಡಿಸಿದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ದೂರು (Complaint lodged against CM Bommai) ದಾಖಲಾಗಿದೆ. 

ಸಾಮಾಜಿಕ ಕಾರ್ಯಕರ್ತ ಆರ್.ಮಾನಯ್ಯ ಅವರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದೂರುದಾರರು ತಮ್ಮ ದೂರಿನಲ್ಲಿ ಎಲ್ಲಾ ರಾಜ್ಯ ಬಿಜೆಪಿ ಮುಖಂಡರ ವಿರುದ್ಧ (Complaint lodged against BJP MLAs) ಕಾನೂನು ಕ್ರಮಕ್ಕೆ ಕೋರಿದ್ದಾರೆ.

ಮತಾಂತರ ತಡೆ ಮಸೂದೆ (Anti conversion bill)ಯು ಈ ಸಮುದಾಯಗಳನ್ನು ಅವಮಾನಿಸಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆಯಲ್ಲಿ ನಿರ್ದಿಷ್ಟ ಸಮುದಾಯಗಳನ್ನು ಚಿತ್ರಿಸಿರುವ ಕುರಿತು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಮಸೂದೆಯನ್ನು ಮಂಡಿಸಿದಾಗ, ಸದನದಲ್ಲಿ ಮಸೂದೆಯನ್ನು ಸ್ವಾಗತಿಸಲು ಎಲ್ಲಾ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ತಮ್ಮ ಮೇಜಿನ ಮೇಲೆ ಬಡಿದರು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ದೂರಿನಲ್ಲಿ ಕೋರಿದ್ದಾರೆ.

ಇವರೆಲ್ಲರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಕೋರಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 23 ರಂದು ಮತಾಂತರ ತಡೆ ಮಸೂದೆಯನ್ನು ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಕೌನ್ಸಿಲ್‌ನಲ್ಲಿ ಮಸೂದೆ ಮಂಡನೆಯಾಗಬೇಕಿದೆ. 2022 ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಕೌನ್ಸಿಲ್‌ನಲ್ಲಿ ಮಸೂದೆಯನ್ನು ಅಂಗೀಕರಿಸಲು ಸರ್ಕಾರಕ್ಕೆ ಅವಕಾಶವಿದೆ ಎಂದು ಕಾನೂನು ಸಚಿವ ಮಧು ಸ್ವಾಮಿ ಹೇಳಿದ್ದಾರೆ. ಅಧಿವೇಶನ ವಿಳಂಬವಾದಲ್ಲಿ, ಸುಗ್ರೀವಾಜ್ಞೆಯನ್ನು ಪ್ರಕಟಿಸುವ ಆಯ್ಕೆಯು ಇರುತ್ತದೆ.

ಉಭಯ ಸದನಗಳಲ್ಲಿ ಯಾವುದಾದರೂ ಒಂದು ಸದನದಲ್ಲಿ ಅದನ್ನು ತಿರಸ್ಕರಿಸದಿದ್ದಲ್ಲಿ ಸರ್ಕಾರವು ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಅಂಗೀಕರಿಸಬಹುದು. ಆದರೆ, ಸುಗ್ರೀವಾಜ್ಞೆ ಹೊರಡಿಸಿದ ತಕ್ಷಣ ಮುಂದಿನ ಅಧಿವೇಶನದಲ್ಲಿ ಮಸೂದೆಗೆ ಶಾಸಕಾಂಗದ ಅನುಮೋದನೆಯನ್ನು ಪಡೆಯಬೇಕು.

ಈ ಮಧ್ಯೆ, ಸುಗ್ರೀವಾಜ್ಞೆ ಹೊರಡಿಸಿದ ನಂತರವೂ ಮಸೂದೆಯನ್ನು ಸೋಲಿಸಲು ಏನು ಬೇಕಾದರೂ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ಮಸೂದೆಯನ್ನು ರದ್ದುಗೊಳಿಸುವುದಾಗಿ ಹೇಳಿದೆ. 

ಇದನ್ನೂ ಓದಿ: ಜನವರಿ 1 ರಿಂದ ಹೆಚ್ಚಾಗಲಿದೆ ಎಟಿಎಂ withdrawal ಶುಲ್ಕ: ನೀವು ಎಷ್ಟು ಪಾವತಿಸಬೇಕಾಗುತ್ತದೆ ಎಂಬುದನ್ನು ತಿಳಿಯಿರಿ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News