BCM ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

Written by - Zee Kannada News Desk | Last Updated : Dec 31, 2021, 03:27 PM IST
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
 BCM ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ : ಅವಧಿ ವಿಸ್ತರಣೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಡಿ. 20 ರೊಳಗೆ ಅರ್ಜಿ ಸಲ್ಲಿಸಲು ಅವಕಾಶನಿಡಲಾಗಿತ್ತು.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಂದ  ಮನವಿ ಸಲ್ಲಿಕೆಯಾದ ಪ್ರಯುಕ್ತ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆಯ ದಿನಾಂಕವನ್ನು 2022ರ ಜನವರಿ 03 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ : Ind Vs SA : ದ. ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಗಳಿಸಿದ್ದು ಹೇಗೆ? ರಹಸ್ಯ ಬಿಚ್ಚಿಟ್ಟ ಕೆಎಲ್ ರಾಹುಲ್   

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷದೊಳಗಿರಬೇಕು.ವೆಬ್ ಸೈಟ್  www.bcwd.karnataka.gov.in ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ಅನ್ನು ನೋಡಬಹುದು.

ಇದನ್ನೂ ಓದಿ : Pro Kabaddi PKL:ಹರಿಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಗೆ ಗೆಲುವು

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwd.hostels@karnataka.gov.in ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.ಹಾಗೂ ಸಹಾಯವಾಣಿ ಸಂಖ್ಯೆ 080-8050370006 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News