ಪ್ರಧಾನಿ ಮೋದಿಗೆ ಭದ್ರತಾ ಲೋಪ: ಪಂಜಾಬ್ ಸರ್ಕಾರ ಬರಖಾಸ್ತು ಮಾಡಲು ಸಿಎಂ ಬೊಮ್ಮಾಯಿ ಆಗ್ರಹ

ಕೇಂದ್ರ ಗೃಹ ಸಚಿವಾಲಯವು ಈ ಘಟನೆ ‘ದೊಡ್ಡ ಭದ್ರತಾ ಲೋಪ’ ಅಂತಾ ಹೇಳಿದ್ದು, ಈ ಬಗ್ಗೆ ವರದಿ ನೀಡುವಂತೆ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ.

Written by - Zee Kannada News Desk | Last Updated : Jan 5, 2022, 06:50 PM IST
  • ಪ್ರಧಾನಿ ಮೋದಿಗೆ ಸೂಕ್ತ ಭದ್ರತೆ ಒದಗಿಸದ ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ
  • ಪಂಜಾಬ್ ಸಿಎಂ ಚರಣಜೀತ್ ಸಿಂಗ್ ಚೆನ್ನಿ ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ
  • ಪಂಜಾಬ್ ಸರ್ಕಾರವನ್ನು ಕೂಡಲೇ ಬರಖಾಸ್ತು ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ
ಪ್ರಧಾನಿ ಮೋದಿಗೆ ಭದ್ರತಾ ಲೋಪ: ಪಂಜಾಬ್ ಸರ್ಕಾರ ಬರಖಾಸ್ತು ಮಾಡಲು ಸಿಎಂ ಬೊಮ್ಮಾಯಿ ಆಗ್ರಹ title=
ಚರಣಜೀತ್ ಸಿಂಗ್ ಚೆನ್ನಿ ಹೇಳಿಕೆ ಖಂಡಿಸಿದ ಸಿಎಂ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗದ ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಹೀಗಾಗಿ  ಪಂಜಾಬ್ ಸರ್ಕಾರವನ್ನು ಕೂಡಲೇ ಬರಖಾಸ್ತು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬುಧವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಆಗಿರುವ ಭದ್ರತಾ ಲೋಪದ ಘಟನೆಗೆ ಕಿಡಿಕಾರಿದ್ದಾರೆ.  

ಪಂಜಾಬ್ ಗಡಿಯಲ್ಲಿ ಪಂಜಾಬ್ ಸರ್ಕಾರ(Punjab Government)ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ದೇಶದ ಪ್ರಧಾನಮಂತ್ರಿಗಳು ಮುಕ್ತವಾಗಿ ಓಡಾಡಲು ವ್ಯವಸ್ಥೆಗಳನ್ನು ಮಾಡಿಕೊಡದೇ ಇರುವುದಕ್ಕೆ ದೇಶದಾದ್ಯಂತ ಖಂಡನೆ ವ್ಯಕ್ತವಾಗಿದೆ. ಇದೊಂದು ಖಂಡಾನಾರ್ಹ ವಿಚಾರ. ಪ್ರಧಾನಮಂತ್ರಿಗಳಿಗೆ ಗೌರವ ಕೊಡುವುದು ಎಲ್ಲ ಸರ್ಕಾರಗಳ ಕರ್ತವ್ಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಹಠ ಮಾಡಿದ್ರೆ ಕಾನೂನು ಕ್ರಮವೆಂದ ಸಚಿವ ಸುಧಾಕರ್

ಚರಣಜೀತ್ ಸಿಂಗ್ ಚೆನ್ನಿ ಹೇಳಿಕೆಗೆ ಸಿಎಂ ಖಂಡನೆ

ಘಟನೆ ಕುರಿತು ಟ್ವೀಟ್ ಕೂಡ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ‘ಪ್ರಧಾನಿ ನರೇಂದ್ರ ಮೋದಿಜೀ(Narendra Modi) ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜೀತ್ ಸಿಂಗ್ ಚೆನ್ನಿ(Charanjit Singh Channi)ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಅಂತಾ ಹೇಳಿದ್ದಾರೆ.

ಏನಿದು ಭದ್ರತಾ ಲೋಪದ ಘಟನೆ..?

ರೈತರ ಪ್ರತಿಭಟನೆಯಿಂದ ಪ್ರಧಾನಿ ಮೋದಿ(PM Modi) ಪಂಜಾಬ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿದ ಘಟನೆ ನಡೆದಿತ್ತು. ಬಳಿಕ ಪ್ರಧಾನಿ ಮೋದಿಯವರು ಫಿರೋಜ್‌ಪುರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ರದ್ದುಗೊಳಿಸಿ ದೆಹಲಿಗೆ ವಾಪಸಾಗಿದ್ದಾರೆ. ಕೇಂದ್ರ ಸರ್ಕಾರ ಇದೊಂದು ಪ್ರಮುಖ ಭದ್ರತಾ ಲೋಪವೆಂದು ಹೇಳಿದೆ. ಪ್ರಧಾನಿ ಮೋದಿಯವರು ಬಟಿಂಡಾದಿಂದ ಫಿರೋಜ್‌ಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದ ಅವರು ದಿಢೀರ್ ರಸ್ತೆ ಮೂಲಕ ಪ್ರಯಾಣಿಸಿದ್ದರು. ಪ್ರಧಾನಿ ತೆರಳುತ್ತಿದ್ದ ರಸ್ತೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರಿಂದ ಫಿರೋಜ್‌ಪುರ ಬಳಿಯ ಹುಸೇನಿವಾಲಾದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಫ್ಲೈಓವರ್‌ನಲ್ಲಿ ಪ್ರಧಾನಿ ಮೋದಿ(PM Modi) 15 ರಿಂದ 20 ನಿಮಿಷಗಳ ಕಾಲ ಸಿಲುಕಿದ್ದರು.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಕರೆ: ಸಿಎಂ

ಕೇಂದ್ರ ಗೃಹ ಸಚಿವಾಲಯವು ಈ ಘಟನೆ ‘ದೊಡ್ಡ ಭದ್ರತಾ ಲೋಪ’(Security Lapse)ಅಂತಾ ಹೇಳಿದ್ದು, ಈ ಬಗ್ಗೆ ವರದಿ ನೀಡುವಂತೆ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ. ಭದ್ರತಾ ಲೋಪದ ಕಾರಣ ಪ್ರಧಾನಿ ಮೋದಿ ಬಟಿಂಡಾದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದೆ ವಿಮಾನ ನಿಲ್ದಾಣಕ್ಕೆ ವಾಪಸ್‌ ಆದರು ಎಂದು ಗೃಹ ಸಚಿವಾಲಯ ತಿಳಿಸಿದೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News