ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಬಹು ನಿರೀಕ್ಷಿತ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶನಿವಾರ (ಜನವರಿ 8, 2022) ಬಿಡುಗಡೆ ಮಾಡಿದೆ.
"ಓಮಿಕ್ರಾನ್ ರೂಪಾಂತರದ ದೃಷ್ಟಿಯಿಂದ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ, ತಜ್ಞರು ಮತ್ತು ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಸಭೆಗಳನ್ನು ನಡೆಸಿತು. ಈ ಅಭಿಪ್ರಾಯಗಳನ್ನು ಮತ್ತು ತಳಮಟ್ಟದಲ್ಲಿನ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡ ನಂತರ, ಚುನಾವಣಾ ಆಯೋಗ ಸುರಕ್ಷತೆಯೊಂದಿಗೆ ಚುನಾವಣೆಗಳನ್ನು ಘೋಷಿಸಲು ನಿರ್ಧರಿಸಿದೆ. ಈಗ ನಿಯಮಾವಳಿ ಜಾರಿಯಲ್ಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ಇದನ್ನೂ ಓದಿ- Bangalore:1200 ರೂ. ಗಾಗಿ ಬಿತ್ತು ಹೆಣ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಂದೇ ಬಿಟ್ಟರು..
"ವಿಸ್ತೃತ ಸಿದ್ಧತೆಗಳೊಂದಿಗೆ ಗರಿಷ್ಠ ಮತದಾರರ ಭಾಗವಹಿಸುವಿಕೆಯೊಂದಿಗೆ ಐದು ರಾಜ್ಯಗಳಲ್ಲಿ ಕೋವಿಡ್-ಸುರಕ್ಷಿತ ಚುನಾವಣೆಗಳನ್ನು ನಡೆಸುವ ಗುರಿಯನ್ನು ನಾವು ಹೊಂದಿದ್ದೇವೆ.80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಕೋವಿಡ್-19 ಸೋಂಕಿತ ರೋಗಿಗಳು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಬಹುದು' ಎಂದು ಚಂದ್ರು ತಿಳಿಸಿದ್ದಾರೆ.
ಒಟ್ಟು 18.34 ಕೋಟಿ ಮತದಾರರು ಈ ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದು, 8.55 ಕೋಟಿ ಮಹಿಳಾ ಮತದಾರರಿದ್ದಾರೆ.
ಎಲ್ಲಾ ಚುನಾವಣೆಗಳು ಏಳು ಹಂತಗಳಲ್ಲಿ ಪೂರ್ಣ:
ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಒಟ್ಟು ಏಳು ಹಂತಗಳಲ್ಲಿ ಪೂರ್ಣಗೊಳ್ಳಲಿದೆ ಮತ್ತು ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದರು.
"ಉತ್ತರ ಪ್ರದೇಶ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಫೆಬ್ರವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಡೆಯಲಿದೆ" ಎಂದು ಚಂದ್ರ ಹೇಳಿದರು.
ಇದನ್ನೂ ಓದಿ- ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್
ಪ್ರಸ್ತುತ ಉತ್ತರ ಪ್ರದೇಶದ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿದ್ದರೆ, ಇತರ ನಾಲ್ಕು ವಿಧಾನಸಭೆಗಳ ಅವಧಿಯು ಮಾರ್ಚ್‌ನಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ.ಈ 5 ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳ ಪೈಕಿ, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಸೇರಿದಂತೆ 4 ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರದಲ್ಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.