ಬೆಂಗಳೂರು: ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರ್ಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy)ಬೇಸರ ವ್ಯಕ್ತಪಡಿಸಿದ್ದಾರೆ.
ಅತಿಥಿ ಉಪನ್ಯಾಸಕರ(Guest Lecturers)ಗೌರವ ಧನ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11,000 ರಿಂದ 13,000 ರೂ. ಗೌರವ ಧನ ನೀಡಲಾಗುತ್ತಿದೆ. ಇದು ಸರ್ಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ’ ಅಂತಾ ಹೇಳಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3
— H D Kumaraswamy (@hd_kumaraswamy) January 8, 2022
ಇದನ್ನೂ ಓದಿ: Mekedatu issue: ರಾಜ್ಯ ಜನತೆ ನಮ್ಮ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ: ಡಿ ಕೆ ಶಿವಕುಮಾರ್
‘ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿ(Narendra Modi)ಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ?’ ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
‘ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು(Guest Lecturers) ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕೆಂದು ಆಗ್ರಹಿಸುತ್ತೇನೆ’ ಅಂತಾ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಹೇಗೆ ಗೊತ್ತೇ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.