ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ: ಆರೋಗ್ಯದ ಜೊತೆಗೆ ರಾಜ್ಯದ ಕೋವಿಡ್ ಪರಿಸ್ಥಿತಿ ವಿಚಾರಿಸಿದ ಪಿಎಂ ಮೋದಿ

PM Modi call to CM Bommai: ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಸಿಎಂ ಮಾಹಿತಿ ನೀಡಿದ್ದಾರೆ. 

Edited by - Zee Kannada News Desk | Last Updated : Jan 11, 2022, 05:50 PM IST
  • ಸಿಎಂ ಬೊಮ್ಮಾಯಿಗೆ ಪ್ರಧಾನಿ ನರೇಂದ್ರ ಮೋದಿ ಕರೆ
  • ಆರೋಗ್ಯದ ಜೊತೆಗೆ ರಾಜ್ಯದ ಕೋವಿಡ್ ಪರಿಸ್ಥಿತಿ ವಿಚಾರಿಸಿದ ಪಿಎಂ
  • ಸಂಜೆ 4:30ಕ್ಕೆ ದೂರವಾಣಿ ಮೂಲಕ ಪಿಎಂ ಮೋದಿ ಅವರಿಂದ ಮುಖ್ಯಮಂತ್ರಿಗಳಿಗೆ ಕರೆ
ಸಿಎಂ ಬೊಮ್ಮಾಯಿಗೆ ಪ್ರಧಾನಿ ಕರೆ: ಆರೋಗ್ಯದ ಜೊತೆಗೆ ರಾಜ್ಯದ ಕೋವಿಡ್ ಪರಿಸ್ಥಿತಿ ವಿಚಾರಿಸಿದ ಪಿಎಂ ಮೋದಿ  title=
ಸಿಎಂ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಕೊರೊನಾ (Corona) ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

ಸಂಜೆ 4:30ಕ್ಕೆ ದೂರವಾಣಿ ಮೂಲಕ ಪಿಎಂ ಮೋದಿ (Prime Minister Narendra Modi) ಅವರಿಂದ ಮುಖ್ಯಮಂತ್ರಿಗಳಿಗೆ ಕರೆ ಬಂದಿದೆ.  ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ ಪ್ರಧಾನಿ, ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆಸಿದ್ದಾರೆ. 

ಇದನ್ನೂ ಓದಿ: Covid-19:ಸಚಿವ ಮಾಧುಸ್ವಾಮಿ, ಸಿಎಂ ಪುತ್ರನಿಗೆ ಕೊರೊನಾ ಪಾಸಿಟಿವ್

ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದದ್ದಾರೆ. 

ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಮಾಹಿತಿ:

ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ (Karnataka Covid conditon) ಬಗ್ಗೆಯೂ ಪ್ರಧಾನಿಗಳಿಗೆ ಸಿಎಂ ಮಾಹಿತಿ ನೀಡಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಸಭೆ ನಡೆಸುತ್ತಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿಯಾಗಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. 

ಲಸಿಕೆ ಅಭಿಯಾನವನ್ನು (Vaccination campaign)  ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಪ್ರಧಾನಿಗೆ ಸಿಎಂ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಗಂಡಸ್ತನ ಇರೋದು ಬಿಜೆಪಿಗೆ ಮಾತ್ರ: ಅಶ್ವತ್ಥ ನಾರಾಯಣ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News