Winter Food: ಚಳಿಗಾಲದಲ್ಲಿ ಫಿಟ್ ಮತ್ತು ಆರೋಗ್ಯಕರವಾಗಿರಲು ನಿಮ್ಮ ಆಹಾರದಲ್ಲಿ ಕೆಲವು ತರಕಾರಿಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯ. ಯಾವುದೇ ಋತುವೇ ಆಗಿರಲಿ ಆ ಋತುಮಾನದ ತರಕಾರಿಗಳನ್ನು ತಿನ್ನುವುದು ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಹಲವು ರೋಗಗಳಿಂದ ದೂರವಿರಬಹುದು. ಹಾಗಿದ್ದರೆ ಚಳಿಗಾಲದಲ್ಲಿ ಯಾವ ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯೋಣ.
ಸೊಪ್ಪು:
ಪಾಲಕ್ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಉತ್ತಮ ಮೂಲವಾಗಿದೆ. ಇದನ್ನು ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆ ನೀಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಮೂಲಂಗಿ:
ಮೂಲಂಗಿಯಲ್ಲಿ ವಿಟಮಿನ್ ಬಿ6, ವಿಟಮಿನ್ ಎ (Vitamin A), ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಫರಸ್ ಇದೆ. ಇದಲ್ಲದೆ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಸಹ ಒಳಗೊಂಡಿದೆ. ಮೂಲಂಗಿಯನ್ನು ಸೇವಿಸುವುದರಿಂದ ಕೂಡ ನಿಮ್ಮನ್ನು ಹೈಡ್ರೇಟ್ ಆಗಿರಿಸುತ್ತದೆ.
ಇದನ್ನೂ ಓದಿ- Curd: ಮೊಸರಿನೊಂದಿಗೆ ಈ 6 ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ
ಕ್ಯಾರೆಟ್ :
ಕ್ಯಾರೆಟ್ ಸೇವನೆಯು ಸಹ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಕ್ಯಾರೆಟ್ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ನ ಉತ್ತಮ ಮೂಲವಾಗಿದೆ. ಇದರಿಂದ ದೃಷ್ಟಿ ಪ್ರಕಾಶಮಾನವಾಗುತ್ತದೆ. ಇದು ಚರ್ಮ ಮತ್ತು ಕೂದಲಿಗೆ ಸಹ ಪ್ರಯೋಜನವನ್ನು ನೀಡುತ್ತದೆ. ರಕ್ತಹೀನತೆಯ ಸಮಸ್ಯೆಯಲ್ಲಿ ಕ್ಯಾರೆಟ್ ತಿನ್ನುವುದು ಸಹ ಪ್ರಯೋಜನಕಾರಿಯಾಗಿದೆ. ಏಕೆಂದರೆ, ಅದರಲ್ಲಿ ಕಬ್ಬಿಣದ ಅಂಶವಿದೆ.
ದಂಟಿನ ಸೊಪ್ಪು:
ನೀವು ಚಳಿಗಾಲದಲ್ಲಿ (Winter Diet) ದಂಟಿನ ಸೊಪ್ಪಿನ ಸಾಗು ತಯಾರಿಸಿ ಸಹ ಸೇವಿಸಬಹುದು. ಇದನ್ನು ರೆಡ್ ಸಾಗ್ ಎಂದೂ ಕರೆಯುತ್ತಾರೆ. ದಂಟಿನ ಸೊಪ್ಪಿನಲ್ಲಿ ಪ್ರೋಟೀನ್, ಖನಿಜಗಳು, ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ರಂಜಕವನ್ನು ಹೊಂದಿರುತ್ತದೆ. ಇದು ಮಧುಮೇಹ, ರಕ್ತಹೀನತೆ ಮತ್ತು ಕ್ಯಾನ್ಸರ್ ಅನ್ನು ತಡೆಯುತ್ತದೆ. ದಂಟಿನ ಸೊಪ್ಪು ಕಾರ್ಬೋಹೈಡ್ರೇಟ್ಗಳು ಮತ್ತು ಫೈಬರ್ನ ಉತ್ತಮ ಮೂಲವಾಗಿದೆ.
ಬತುವಾ ಸಾಗ್:
ಚಳಿಗಾಲದಲ್ಲಿ ಬತುವಾ ಸೊಪ್ಪನ್ನು ಸೇವಿಸುವುದು ಸಹ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಡಿ, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಪೊಟ್ಯಾಸಿಯಮ್ ಇದೆ. ಬತುವಾ ಸೊಪ್ಪನ್ನು ತಿನ್ನುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರೊಂದಿಗೆ ರಕ್ತವನ್ನು ಶುದ್ಧೀಕರಿಸಲು ಮತ್ತು ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ಇದರಿಂದ ಹುಳಿ ತೇಗಿನ ಸಮಸ್ಯೆಯೂ ದೂರವಾಗುತ್ತದೆ.
ನವಿಲುಕೋಸು:
ಟರ್ನಿಪ್‌ಗಳಲ್ಲಿ ಅಂದರೆ ಗೆಡ್ಡೆಕೋಸಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ಬೀಟಾ ಕ್ಯಾರೋಟಿನ್ ಮತ್ತು ಪೊಟ್ಯಾಸಿಯಮ್ ಪೋಷಕಾಂಶಗಳಿಂದ ಸಮೃದ್ಧವಾಗಿ ಕಂಡುಬರುತ್ತವೆ. ಇದನ್ನು ಸಲಾಡ್, ಜ್ಯೂಸ್ ಅಥವಾ ತರಕಾರಿ ರೂಪದಲ್ಲಿ ಸೇವಿಸಬಹುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.