ಧಾರವಾಡ: ನಾಡಿನ ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಸ್.ಡಿ.ಎಮ್.ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಪ್ಪ-ಅಮ್ಮ, ಅಪ್ಪುವನ್ನು ಕಳೆದುಕೊಂಡ ದುಃಖದಲ್ಲಿ ದುನಿಯಾ ವಿಜಯ್, ಹುಟ್ಟುಹಬ್ಬಕ್ಕೆ ಬ್ರೇಕ್!
ಇಂದು ಎಸ್ಡಿಎಂ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸನಗೌಡ ಕರಿಗೌಡರ ಅವರು ಬೆಳಿಗ್ಗೆ ಭೇಟಿ ನೀಡಿ ಡಾ. ಚನ್ನವೀರ ಕಣವಿ ಅವರ ಆರೋಗ್ಯ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು.
ಡಾ. ಚೆನ್ನವೀರ ಕಣವಿ ಅವರು ಆಸ್ಪತ್ರೆಗೆ ದಾಖಲಾದ ದಿನದಿಂದ ಇಲ್ಲಿಯವರೆಗೆ ಅವರಿಗೆ ನೀಡಿರುವ ಚಿಕಿತ್ಸೆ ಹಾಗೂ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು.ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.ತಜ್ಞ ವೈದ್ಯರ ತಂಡ ನಿರಂತರ ನಿಗಾವಹಿಸಿದ್ದು, ವೈದ್ಯರು ಡಾ. ಕಣವಿ ಅವರ ಆರೋಗ್ಯ ಸುಧಾರಿಸುವ ಆಶಯ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ: ಸಿಎಂ ಮನೆ ಭದ್ರತೆಯಲ್ಲಿದ್ದ ಪೊಲೀಸರಿಂದ ಗಾಂಜಾ ಮಾರಾಟ ಯತ್ನ ಪ್ರಕರಣ ಸಿಸಿಬಿಗೆ ವರ್ಗಾವಣೆ
ಡಿಹೆಚ್ಓ ಡಾ. ಬಸನಗೌಡ ಕರಿಗೌಡರ ಅವರು ವೈದ್ಯರೊಂದಿಗೆ ಮಾತನಾಡಿ, ಕವಿ ಕಣವಿ ಅವರ ಆರೋಗ್ಯ ಚಿಕಿತ್ಸೆಗೆ ಎಲ್ಲ ನೆರವು ನೀಡುವುದಾಗಿ ಸರಕಾರ ತಿಳಿಸಿದ್ದು, ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ನೀಡಿ ಬೇಗ ಗುಣಮುಖರಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ನಿಮ್ಮ ನೆರವಿಗೆ ಸದಾ ಸಿದ್ಧವಿದೆ ಎಂದು ವೈದ್ಯರ ತಂಡಕ್ಕೆ ತಿಳಿಸಿದರು. ಡಾ. ಚೆನ್ನವೀರ ಕಣವಿ ಅವರ ಹಿರಿಯ ಮಗ ಶಿವಾನಂದ ಕಣವಿ ಅವರೊಂದಿಗೂ ಸಮಾಲೋಚಿಸಿ, ಧೈರ್ಯ ನೀಡಿದರು. ಈ ಭೇಟಿ ಕುರಿತು ಸಮಗ್ರ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಡಿಎಚ್ಓ ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ, ಉಪಅಧೀಕ್ಷಕ, ತಜ್ಞ ವೈದ್ಯರು ಮತ್ತು ಡಾ.ಕಣವಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.