Mumbai: ಬಹುಮಹಡಿ ಕಟ್ಟಡದ 18ನೇ ಮಹಡಿಯಲ್ಲಿ ಭೀಕರ ಅಗ್ನಿ ಅವಘಡ, ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

Fire Accident: ಬೆಂಕಿ ಅನಾಹುತಕ್ಕೆ (Fire Accident) ಕಾರಣ ಇನ್ನೂ ತಿಳಿದುಬಂದಿಲ್ಲ. ಕಟ್ಟಡದಲ್ಲಿ ವಾಸಿಸುತ್ತಿದ್ದ ಬಹುತೇಕ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

Written by - Nitin Tabib | Last Updated : Jan 22, 2022, 11:11 AM IST
  • ಮುಂಬೈನ 20 ಮಹಡಿಗಳಿರುವ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ.
  • ಬೆಂಕಿ 3ನೇ ಲೆವಲ್ ನಲ್ಲಿದೆ ಎಂದು ಮಾಹಿತಿ ನೀಡಿದ ಅಧಿಕಾರಿಗಳು
  • ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಫೈರ್ ಬ್ರಿಗೆಡ್ ಅಧಿಕಾರಿಗಳು
Mumbai: ಬಹುಮಹಡಿ ಕಟ್ಟಡದ 18ನೇ ಮಹಡಿಯಲ್ಲಿ ಭೀಕರ ಅಗ್ನಿ ಅವಘಡ, ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ title=
Mumbai Fire Accident (File Photo)

Mumbai Fire Accident - ಮಹಾರಾಷ್ಟ್ರದ (Maharashtra) ರಾಜಧಾನಿ ಮುಂಬೈನ (Mumbai) ಕಮಲಾ ಬಿಲ್ಡಿಂಗ್ (Kamala Building) ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 20 ಅಂತಸ್ತಿನ ಕಟ್ಟಡದ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಬೈನ ತಾರ್ಡಿಯೊ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 18ನೇ ಮಹಡಿಯಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಬೆಂಕಿ 3ನೇ ಲೆವಲ್ ನಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ-CoWin App Data Leak!: ಸಾವಿರಾರು ಜನರ ವೈಯಕ್ತಿಕ ಮಾಹಿತಿ ಅಪಾಯದಲ್ಲಿ!

ಗಾಯಾಳುಗಳನ್ನು ಭೇಟಿ ಮಾಡಿದ ಮೇಯರ್
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 5ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ. ಅಪಘಾತದ ಮಾಹಿತಿ ಪಡೆದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನೂ ಭೇಟಿ ಮಾಡಿದ್ದಾರೆ. ಕಟ್ಟಡದಿಂದ ಹೆಚ್ಚಿನ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ-ಹೃದಯ ಬಳಿಕ ಇದೀಗ Brain Dead ಆಗಿರುವ ವ್ಯಕ್ತಿಗೆ ಹಂದಿಯ ಮೂತ್ರಪಿಂಡ ಕಸಿ ಮಾಡಿದ ವೈದ್ಯರು

ಅಪಘಾತ ಸಂಭವಿಸಿದ್ದು ಹೇಗೆ?
ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿ ಪ್ರಕಾರ, ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಹಿಂದಿನ ಕಾರಣವನ್ನು ತಿಳಿಯಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ-Golden Blood: ವಿಶ್ವದಲ್ಲಿ ಕೇವಲ 43 ಜನರಲ್ಲಿದೆ ಚಿನ್ನದ ರಕ್ತ! 'Golden Blood' ಸಿಗುವುದು ಅಪರೂಪ ಯಾಕೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News