ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ!: ಎಚ್‌ಡಿಕೆ ಆಕ್ರೋಶ

ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು ಸಿದ್ಧಾಂತವೇ? ‘ಆಪರೇಷನ್‌ ಹಸ್ತʼವೂ ಸಿದ್ಧಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು, ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ? ಅಂತಾ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Jan 23, 2022, 10:03 AM IST
  • ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ
  • ತುಕುಮೂರಿನಿಂದ ಜೆಡಿಎಸ್‌ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ?
  • ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಅಂತಾ ಎಚ್‌ಡಿಕೆ ಪ್ರಶ್ನಿಸಿದ್ದಾರೆ
ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ!: ಎಚ್‌ಡಿಕೆ ಆಕ್ರೋಶ  title=
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ಜೆಡಿಎಸ್‌ ಬಗ್ಗೆ ಮಾತನಾಡುವುದು? ಅಂತಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ‘ತುಕುಮೂರಿನಿಂದ ಜೆಡಿಎಸ್‌(JDS Party) ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ʼನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ ಕಾಯಿರಿ’ ಅಂತಾ ಕುಟುಕಿದಿದ್ದಾರೆ. 

ಇದನ್ನೂ ಓದಿ: ಒಂದೇ ಗಂಟೆಯ ಅವಧಿಯೊಳಗೆ ಶಿವಮೊಗ್ಗದಲ್ಲಿ ಐದು ಕಡೆ ಸರಗಳ್ಳತನ !

‘ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ(Guruswamy) ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ(Siddaramaiah)? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೆ?’ ಅಂತಾ ಎಚ್‌ಡಿಕೆ ಪ್ರಶ್ನಿಸಿದ್ದಾರೆ.

‘ಪ್ರತಿಯೊಂದಕ್ಕೂ ಈ ಸರ್ಕಾರಕ್ಕೆ ಜೆಡಿಎಸ್‌(JDS) ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ‘ಸುಳ್ಳು ನಾಲಗೆʼ; ಅದೇ ಸರ್ಕಾರ ಬರಲು ಮೂಲ ಕಾರಣರಾದ ‘ಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ?’ ಅಂತಾ ಪ್ರಶ್ನಿಸಿದ್ದಾರೆ.

‘ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಸೆ, ಅವಕಾಶ ಸಿಗದೇನೋ ಅನ್ನುವ ಹತಾಶೆ. ಅಭ್ಯರ್ಥಿಗಳಿಲ್ಲ, ಜೆಡಿಎಸ್‌ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ. ನಮ್ಮವರನ್ನು ಹೈಜಾಕ್‌ ಮಾಡಿ ಅವರಿಗೆ ಟಿಕೆಟ್‌ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ನಿಮ್ಮ ‘ಕಂತ್ರಿʼ ರಾಜಕೀಯ ಎಲ್ಲರಿಗೂ ಗೊತ್ತಿದೆ’ ಅಂತಾ ಕುಮಾರಸ್ವಾಮಿ(HD Kumaraswamy) ಟೀಕಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ 1 ರಿಂದ 8 ನೇ ತರಗತಿಗಳನ್ನು ಪುನರ್ ಆರಂಭಿಸಲು ಆದೇಶ..!

‘ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು ಸಿದ್ಧಾಂತವೇ? ‘ಆಪರೇಷನ್‌ ಹಸ್ತʼವೂ ಸಿದ್ಧಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು, ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ? ನೀವು ಜೆಡಿಎಸ್‌(JDS) ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆಯಾಗಬೇಕು ನಿಮಗೆ. ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ’ ಅಂತಾ ಕಿಡಿಕಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News