Corona Positive: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್ ಪಾಸಿಟಿವ್

Corona Positive: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಗುರುವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Edited by - Chetana Devarmani | Last Updated : Jan 27, 2022, 08:46 PM IST
  • ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್ ಪಾಸಿಟಿವ್
  • ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ವಿದೇಶಾಂಗ ಸಚಿವರು
  • ನಿನ್ನೆ 2,86,384 ಹೊಸ ಕೋವಿಡ್ ಪ್ರಕರಣಗಳು ವರದಿ
Corona Positive: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್‌ಗೆ ಕೋವಿಡ್ ಪಾಸಿಟಿವ್  title=
ವಿದೇಶಾಂಗ ಸಚಿವ ಎಸ್.ಜೈಶಂಕರ್

ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಗುರುವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೊಂದಿಗೆ ಇತ್ತೀಚೆಗೆ ಸಂಪರ್ಕದಲ್ಲಿರುವ ಎಲ್ಲರಿಗೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ಇಂದು (ಜ.27) ವಿದೇಶಾಂಗ ಸಚಿವ ಎಸ್.ಜೈಶಂಕರ್ (MEA Jaishankar) ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ: Budget 2022 : ಜನವರಿ 31 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೋವಿಡ್ ಪಾಸಿಟಿವ್ (Corona) ಬಂದಿದೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರಿಗೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ" ಎಂದು ಮನವಿ ಮಾಡಿದ್ದಾರೆ. 

 

 

ಇದಕ್ಕೂ ಮುನ್ನ ಗುರುವಾರ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಭಾರತ ಮತ್ತು ಫ್ರೇಸ್ ನಡುವಿನ ಬಲವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಪುನರುಚ್ಚರಿಸಿದರು. ಈ ರಾಜತಾಂತ್ರಿಕ ಸಂಬಂಧವು ಸ್ಥಿರವಾಗಿ ಪ್ರಬುದ್ಧವಾಗಿದೆ ಮತ್ತು ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಇದು ಸೂಕ್ತ ಸಮಯ ಎಂದು ಹೇಳಿದರು. 

ದೇಶದಲ್ಲಿ ನಿನ್ನೆ 24 ಗಂಟೆಗಳ ಅವಧಿಯಲ್ಲಿ 2,86,384 ಹೊಸ ಕೋವಿಡ್ ಪ್ರಕರಣಗಳು (Covid 19) ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣಗಳ ಹೆಚ್ಚಳ, ಕೇಂದ್ರ ಸರ್ಕಾರ ಹೇಳಿದ್ದೇನು?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News