ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಪ್ರಮಾಣವಚನ ಸಮಾರಂಭದಲ್ಲಿ ದೇಶದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಆಯ್ಕೆಯಾಗಿದ್ದು, ನಾಳೆ ನಡೆಯಲಿರುವ ಎಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, ಪ್ರಮಾಣವಚನದಲ್ಲಿ ಭಾಗಿಯಾಗಲು ಖುದ್ದು ಕುಮಾರಸ್ವಾಮಿಯವರೇ ಅನೇಕ ನಾಯಕರನ್ನು ಆಹ್ವಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ಅನೇಕ ನಾಯಕರು ಪಾಲ್ಗೊಳ್ಳಲಿದ್ದು, ಆ ಘಟಾನುಘಟಿ ನಾಯಕರ ಪಟ್ಟಿ ಇಂತಿದೆ.
1. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
2. ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥ ಮಾಯಾವತಿ
3. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
4. ಕೇರಳ ಸಿಎಂ ಪಿಣರಾಯ್ ವಿಜಯನ್
5. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್
6. ಆರ್ಜೆಡಿಯ ತೇಜಸ್ವಿ ಯಾದವ್ (ಲಾಲು ಪ್ರಸಾದ್ ಯಾದವ್ ಪುತ್ರ)
7. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು
8. ತೆಲಂಗಾಣ ಸಿಎಂ ಕೆ.ಸಿ.ಆರ್ ಮತ್ತವರ ಮಗ ಕೆಟಿಆರ್
9. ರಾಷ್ಟ್ರೀಯ ಲೋಕ ದಳದ ಅಜಿತ್ ಸಿಂಗ್ (ಮಾಜಿ ಕೇಂದ್ರ ಸಚಿವ)
10. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
11. ನಟ ಮತ್ತು ರಾಜಕಾರಣಿ ಕಮಲ್ ಹಾಸನ್
I am going to attend oath taking ceremony of Karnataka CM designate HD Kumaraswamy, tomorrow: Kamal Hassan, Makkal Needhi Maiam pic.twitter.com/1UMaF63Op0
— ANI (@ANI) May 22, 2018
12. ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉತ್ತರ ಪ್ರದೇಶದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾಗಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.