ಬೆಂಗಳೂರು: ರಾಯಚೂರು ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ(ಗುಂಪು)ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಆಯ್ಕೆ ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸಮಿತಿಯ ನಿರ್ಣಯವೇ ಅಂತಿಮವಾಗಿದ್ದು, ಆಸಕ್ತರು ಫೆ.11ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿವರಗಳು: ಹುದ್ದೆಯ ಹೆಸರು: ಸಮುದಾಯ ಸಂಪನ್ಮೂಲ ವ್ಯಕ್ತಿ, ಹುದ್ದೆ ಸಂಖ್ಯೆ-03, ಮಾಸಿಕ ಗೌರವಧನ : ರೂ.8ಸಾವಿರ ಮತ್ತು ಸಾರಿಗೆ 2 ಸಾವಿರ ರೂ. (ಅಗತ್ಯತೆಗೆ ತಕ್ಕಂತೆ ಗರಿಷ್ಠ).
ಅರ್ಹತೆಗಳು: ಕನಿಷ್ಠ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: Murugesh R Nirani: 2365.99 ಕೋಟಿ ರೂ. ಬಂಡವಾಳ ಆಕರ್ಷಿಸಿದ ರಾಜ್ಯ, 10904 ಉದ್ಯೋಗ ಸೃಷ್ಟಿ
ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಕಾಯಂ ವಾಸವಿದ್ದು , ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯರಾಗಿರಬೇಕು,
ಆಂತರಿಕ ಸಾಲ ಪಡೆದು ಕಟುಬಾಕಿದಾರರಾಗಿರಬಾರದು, ಸರ್ಕಾರಿ/ಅರೇ ಸಕಾರಿ/ಎನ್ .ಜಿ .ಓ/ ಗಳಲ್ಲಿ ಉದ್ಯೋಗಸ್ಥರಾಗಿರಬಾರದು,
ಉತ್ತಮ ಸಂವಹನ ಕೌಶಲ್ಯ ಜೋತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು.
ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು. ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
ನಗರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಚೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕ ಮಾಡಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.