ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿಧು, ಸಿದ್ದು ಸಾಕು: ಬಿಜೆಪಿ

ಸಿದ್ದು ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ ಅಂತಾ ಬಿಜೆಪಿ ಟೀಕಿಸಿದೆ.

Written by - Zee Kannada News Desk | Last Updated : Feb 7, 2022, 12:47 PM IST
  • ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ
  • ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ನವಜೋತ್ ಸಿಂಗ್ ಸಿಧು, ಸಿದ್ದರಾಮಯ್ಯ ಸಾಕು
  • ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ "ನಿಗಾ" ಘಟಕ ಸೇರುವಂತಾಗಿದೆಯೇ? ಎಂದು ಬಿಜೆಪಿ ಪ್ರಶ್ನೆ
ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿಧು, ಸಿದ್ದು ಸಾಕು: ಬಿಜೆಪಿ title=
ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು(Navjot Singh Sidhu), ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಕು ಅಂತಾ ಬಿಜೆಪಿ(BJP) ಟೀಕಿಸಿದೆ. #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ’ ಅಂತಾ ಟ್ವೀಟ್ ಮಾಡಿದೆ.

‘ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ "ನಿಗಾ" ಘಟಕ ಸೇರುವಂತಾಗಿದೆಯೇ? ಪಂಜಾಬ್‌ನಲ್ಲಿ ಚುನಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ. ಅಲ್ಲಿ ಸಿಧು, ಇಲ್ಲಿ ಸಿದ್ದು !!! ಕಾಂಗ್ರೆಸ್ ಹೈಕಮಾಂಡ್‌(Congress High Command)ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು’ ಅಂತಾ ವ್ಯಂಗ್ಯವಾಡಿದೆ.

ಇದನ್ನೂ ಓದಿ: Dr.Rajkumar:ವರನಟ ಡಾ.ರಾಜ್​ ಕುಮಾರ್​ ಕಂಚಿನ ಪುತ್ಥಳಿ ಕಳ್ಳತನ

‘ಒಂದೆಡೆ ಅಧ್ಯಕ್ಷರು ಹಿಜಾಬ್ ಬಗ್ಗೆ ಪಕ್ಷದವರಿಗೆ ಎಲ್ಲಿಯೂ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ(Siddaramaiah)ಅವರು ಅಧ್ಯಕ್ಷರ ಮಾತನ್ನು ದಿಕ್ಕರಿಸಿ ಹಿಜಾಬ್ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಮುಂದಿನ ನೋಟಿಸ್ ಸಿದ್ದರಾಮಯ್ಯ ಹೆಸರಿಗೆ ಕಳುಹಿಸುತ್ತೀರಾ?’ ಅಂತಾ ಡಿಕೆಶಿಗೆ ಪ್ರಶ್ನಿಸಿದೆ.

‘ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ(Five State Election) ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Karnataka Budget: ರಾಜ್ಯ ಬಜೆಟ್‌ ತಯಾರಿ; ಫೆ.9 ರಿಂದ ಪೂರ್ವಭಾವಿ ಸಭೆ ನಡೆಸಲು ಸಿ ಎಂ ನಿರ್ಧಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News