ನವದೆಹಲಿ: ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 44 ರನ್ ಗಳ ಗೆಲುವು ಸಾಧಿಸಿದೆ.
ಮೊದಲು ಟಾಸ್ ಗೆದ್ದು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ವೆಸ್ಟ್ ಇಂಡೀಸ್ ತಂಡವು ಭಾರತ ತಂಡವನ್ನು 9 ವಿಕೆಟ್ ಗಳ ನಷ್ಟಕ್ಕೆ 237 ರನ್ ಗಳಿಗೆ ನಿಯಂತ್ರಿಸಿತು.ಭಾರತ ತಂಡವು 43 ರನ್ ಗಳ ನಷ್ಟಕ್ಕೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.ಇದಾದ ನಂತರ ಕೆ.ಎಲ್.ರಾಹುಲ್ 49, ಹಾಗೂ ಸೂರ್ಯಕುಮಾರ್ 64, ಅವರ ಬ್ಯಾಟಿಂಗ್ ನೆರವಿನಿಂದ ಭಾರತ 9 ವಿಕೆಟ್ ನಷ್ಟಕ್ಕೆ 237 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು.
#TeamIndia win the second @Paytm #INDvWI ODI & take an unassailable lead in the series. 👏 👏
4⃣ wickets for @prasidh43
2⃣ wickets for @imShard
1⃣ wicket each for @mdsirajofficial, @yuzi_chahal, @Sundarwashi5 & @HoodaOnFireScorecard ▶️ https://t.co/yqSjTw302p pic.twitter.com/bPb1ca9H7P
— BCCI (@BCCI) February 9, 2022
ಭಾರತ ತಂಡವು ನೀಡಿದ 237 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಕೇವಲ 193 ರನ್ ಗಳಿಗೆ ಆಲೌಟ್ ಆಯಿತು.ಭಾರತದ ಪರವಾಗಿ ಪ್ರಸಿದ್ದ ಕೃಷ್ಣಾ ನಾಲ್ಕು ಹಾಗೂ ಶಾರ್ದುಲ್ ಠಾಕೂರ್ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.