ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (3.0) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ವತಿಯಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.

Written by - Zee Kannada News Desk | Last Updated : Feb 19, 2022, 03:34 PM IST
  • ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.
ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಕೊಪ್ಪಳ: ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (3.0) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ವತಿಯಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: By2Love: ಧನ್ವೀರ್‌-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!

ಐಟಿ/ಐಟಿಇಎಸ್ ಹಾಗೂ ಆಟೋಮೊಬೈಲ್ಸ್ ಸೆಕ್ಟರ್‌ಗಳಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದಲ್ಲಿ ಹಾಗೂ ಬ್ಯೂಟಿ ಮತ್ತು ವೆಲ್‌ನೆಸ್ ಹಾಗೂ ಐಟಿ/ಐಟಿಇಎಸ್ ಸೆಕ್ಟರ್‌ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ.

ಇದನ್ನೂ ಓದಿ: ಕ್ರೇಜಿಸ್ಟಾರ್ ರವಿಚಂದ್ರನ್ ಫ್ಯಾನ್ಸ್ ಗೆ ಗುಡ್ ನ್ಯೂಸ್.. ZEE5 ಒಟಿಟಿಯಲ್ಲಿ ಈ ದಿನದಂದು 'ದೃಶ್ಯ-2' ಸ್ಟ್ರೀಮಿಂಗ್!

ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾ ಮೊ.ಸಂ: 9964221446, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳ, ಮೊ.ಸಂ: 8548016504. ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಮೊ.ಸಂ: 9743839859, 8050651602 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News