ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆಗೆ ಖಂಡನೆ: ಹಂತಕರನ್ನು ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ

ಸಿಎಂ ಬಸವರಾಜ್ ಬೊಮ್ಮಾಯಿ ವೈಯಕ್ತಿಕವಾಗಿ ನಿಗಾವಹಿಸಿ ಪ್ರಚೋದನಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿಬಂದೋಬಸ್ತ್‌ಗೆ ವ್ಯವಸ್ಥೆ ಮಾಡಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Feb 21, 2022, 12:49 PM IST
  • ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣ
  • ಯುವಕನ ಹತ್ಯೆ ಅತ್ಯಂತ ಖಂಡನೀಯ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
  • ಪೊಲೀಸರು ತಕ್ಷಣವೇ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಆಗ್ರಹ
ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆಗೆ ಖಂಡನೆ: ಹಂತಕರನ್ನು ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ title=
ಹಿಂದುಪರ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಸಿದ್ದರಾಮಯ್ಯ ಖಂಡನೆ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ ಅತ್ಯಂತ ಖಂಡನೀಯ. ಪೊಲೀಸರು ತಕ್ಷಣವೇ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ಆಗ್ರಹಿಸಿದ್ದಾರೆ.

‘ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ(Murder In Shivamogga) ಅತ್ಯಂತ ಖಂಡನೀಯ.‌ ಪೊಲೀಸರು ತಕ್ಷಣ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ವೈಯಕ್ತಿಕವಾಗಿ ನಿಗಾ ವಹಿಸಿ ಪ್ರಚೋದನಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿಬಂದೋಬಸ್ತ್‌ಗೆ ವ್ಯವಸ್ಥೆ ಮಾಡಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: #HinduBoyMurder: ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಹಳೆ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಸ್ಥಿತಿ

ಶಿವಮೊಗ್ಗದ ಭಾರತಿ ನಗರದಲ್ಲಿರುವ ಕಾಮತ್ ಪೆಟ್ರೋಲ್ ಬಂಕ್ ಬಳಿ ಕಳೆದ ರಾತ್ರಿ(ಫೆ.20)ಹಿಂದುಪರ ಸಂಘಟನೆ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 26 ವರ್ಷದ ಹರ್ಷ ಎಂಬ ಯುವಕ(Youth Murder)ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಕುರಿತು ದೊಡ್ಡ ಪೇಟೆ ಪೊಲೀಸ್ ಠಾಣೆ(Dodda pete Police Station)ಯಲ್ಲಿ ಪ್ರಕರಣ ದಾಖಲಾಗಿದೆ.  

ಯುವಕನ ಕೊಲೆಗೆ ಸಂಭಂದಪಟ್ಟಂತೆ ಹಳೆಶಿವಮೊಗ್ಗ(Shimoga)ನಗರದಲ್ಲಿ ಉದ್ವಿಗ್ನ ಸ್ಥಿತಿ ರೂಪಗೊಂಡಿದೆ. ಕ್ಲರ್ಕ್ ಪೇಟೆ, ಎಂಕೆಕೆ ರಸ್ತೆ, ಸೀಗೆಹಟ್ಡಿ, ಇಮಾಮ್ ಬಡಾ ಬಡಾವಣೆಗಳಲ್ಲಿ ನಿನ್ನೆ ರಾತ್ರಿ ಕಲ್ಲು ತೂರಾಟ ಮಾಡಿ, ಬೈಕ್ ಗೆ ಬೆಂಕಿ ಹಚ್ಚಲಾಗಿದೆ. ಖಾಕಿಪಡೆ ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಹಿಂದುಪರ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಬಗ್ಗೆ ಹಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: CT Ravi : 'ಶಾಲೆಗಳಲ್ಲಿ ಮಾತ್ರವಲ್ಲ ಬೇರೆ ಕಡೆಯಲ್ಲೂ "ಬುರ್ಖಾ ಬ್ಯಾನ್" ಬಗ್ಗೆ ಚರ್ಚೆ ಆಗಬೇಕು' 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News