ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿದ್ದ ಹಿಂದುಪರ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ(arsha Murder Case) ಸಂಬಂಧ ಇದುವರೆಗೆ ಒಟ್ಟು 8 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಹರ್ಷ ಹತ್ಯೆ ಪ್ರಕರಣ(Shivamogga Youth Murder Case)ಕ್ಕೆ ಸಂಬಂಧಿಸಿದಂತೆ ಮಂಗಳವಾರ(ಫೆ.22) 6 ಮಂದಿಯನ್ನು ಬಂಧಿಸಲಾಗಿತ್ತು. ಇಂದು(ಫೆ.23) ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಅಂತಾ ಹೇಳಿದ್ದಾರೆ. ಪ್ರಕರಣ ಸಂಬಂಧ ಎಲ್ಲಾ ಮಾದರಿಯಲ್ಲೂ ತನಿಖೆ ನಡೆಯುತ್ತಿದೆ. ಇನ್ನುಳಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಅಂತಾ ಹೇಳಿದ್ದಾರೆ.
Bajrang Dal activist Harsha murder case | Eight arrests made till now. Till yesterday, 6 accused were arrested and today 2 more arrests done; total arrests in the case 8: Karnataka Home Minister Araga Jnanendra
(File photo) pic.twitter.com/YBo8wsAsN6
— ANI (@ANI) February 23, 2022
ಇದನ್ನೂ ಓದಿ: ಸಿದ್ದರಾಮಯ್ಯ ಹೇಳುವುದೆಲ್ಲವೂ ಸುಳ್ಳು, ಸುಳ್ಳು, ಸುಳ್ಳು: ಬಿಜೆಪಿ ಟೀಕೆ
ಇಬ್ಬರು ಎಡಿಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಪಡೆಯಿಂದ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಎಲ್ಲವೂ ಹತೋಟಿಯಲ್ಲಿದ್ದು, ಪರಿಸ್ಥಿತಿ ಯಥಾಸ್ಥಿತಿಗೆ ಮರಳಿದೆ. ಹೀಗಾಗಿ ನಾನು ಶಿವಮೊಗ್ಗ(Shivamogga)ದ ಜನತೆಗೆ ಧನ್ಯವಾದ ಹೇಳುತ್ತೇನೆ. ಸಮಯಕ್ಕೆ ಸರಿಯಾಗಿ ಕಾರ್ಯಪ್ರವೃತರಾದ ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಅಂತಾ ಹೇಳಿದ್ದಾರೆ.
Eight arrested as of now officially, others are being interrogated, investigation going on in all angles. Senior officers, including 2 ADGPs, and the Police force are doing an investigation: Karnataka Home Minister Araga Jnanendra on Bajrang Dal activist Harsha's death case pic.twitter.com/OUVj5nsLIC
— ANI (@ANI) February 23, 2022
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾವುದು. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ತನಿಖೆ ನಡೆಯುತ್ತಿದೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವ ಪೊಲೀಸರ ವಿರುದ್ಧದ ಆರೋಪಗಳ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸಲಾಗುವುದು ಅಂತಾ ಗೃಹ ಸಚಿವರು ತಿಳಿಸಿದ್ದಾರೆ.
Karnataka | Route patrolling by Rapid Action Force and Police in Udupi, following the murder of Bajrang Dal worker in Shivamogga pic.twitter.com/nK5rtyH9m1
— ANI (@ANI) February 23, 2022
ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳಿಂದ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ: ಎಚ್ಡಿಕೆ ಆಕ್ರೋಶ
ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ
Karnataka | The situation is fine and under control (in Shivamogga). It is improving. We've sufficient force. 20 platoons of KSRP, RAF is there. We also conducted a flag march yesterday to instil confidence among the public: Dr K Thiyagarajan, DIG Eastern range pic.twitter.com/a2RygQ24Pj
— ANI (@ANI) February 23, 2022
ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಷ ಹತ್ಯೆ ಪ್ರಕರಣ(Harsha murder case) ಸಂಬಂಧ ಈಗಾಗಲೇ ಕೆಲವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ ಅಂತಾ ಪೂರ್ವ ವಲಯದ ಡಿಐಜಿ ಡಾ.ಕೆ.ತ್ಯಾಗರಾಜನ್ ಹೇಳಿದ್ದಾರೆಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.