ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿ ವಿಶ್ವಸಂಸ್ಥೆಯಲ್ಲಿ ರಷ್ಯಾ ವಿರುದ್ಧ ಭಾರತದ ಬೆಂಬಲಕ್ಕಾಗಿ ಮನವಿ ಮಾಡಿದರು.
"ಇಂದು ಪ್ರಧಾನಿ ಮೋದಿ (PM Narendra Modi) ಅವರೊಂದಿಗೆ ಮಾತನಾಡಿದೆ.ಅವರಿಗೆ ದಾಳಿಯನ್ನು ಹಿಮ್ಮೆಟ್ಟಿಸುವ ಮಾರ್ಗದ ಬಗ್ಗೆ ತಿಳಿಸಲಾಗಿದೆ.ಈಗಾಗಲೇ 100,000 ಕ್ಕೂ ಹೆಚ್ಚು ಆಕ್ರಮಣಕಾರರು ನಮ್ಮ ದೇಶದುದ್ದಕ್ಕೂ ಆವರಿಸಿದ್ದಾರೆ, ಅಷ್ಟೇ ಅಲ್ಲದೆ ಅವರು ವಸತಿ ಕಟ್ಟಡಗಳ ಮೇಲೆ ಗುಂಡನ್ನು ಹಾರಿಸುತ್ತಿದ್ದಾರೆ.ಈ ಹಿನ್ನಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ನಮಗೆ ರಾಜಕೀಯ ಬೆಂಬಲ ನೀಡುವಂತೆ ಕೋರಲಾಗಿದೆ.ಆ ಮೂಲಕ ಒಗ್ಗಟ್ಟಾಗಿ ದಾಳಿಕೋರರ ವಿರುದ್ಧ ನಿಲ್ಲಬೇಕು' ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವೀಟ್ ಮಾಡಿದ್ದಾರೆ.
Spoke with 🇮🇳 Prime Minister @narendramodi. Informed of the course of 🇺🇦 repulsing 🇷🇺 aggression. More than 100,000 invaders are on our land. They insidiously fire on residential buildings. Urged 🇮🇳 to give us political support in🇺🇳 Security Council. Stop the aggressor together!
— Володимир Зеленський (@ZelenskyyUa) February 26, 2022
ಇದಕ್ಕೂ ಮೊದಲು ಭದ್ರತಾ ಮಂಡಳಿಯಲ್ಲಿ ಅಮೇರಿಕಾ ದೇಶವು ರಷ್ಯಾದ ವಿರುದ್ಧದ ನಿರ್ಣಯವನ್ನು ಮಂಡಿಸಿತು, ಆದರೆ ಭಾರತ ಮತ್ತು ಚೀನಾ ದೇಶಗಳು ಈ ನಿರ್ಣಯದ ಪರವಾಗಿ ಮತ ಚಲಾಯಿಸದೇ ಮತದಾನದಿಂದ ದೂರ ಉಳಿದಿದ್ದವು.ಭಾರತವು ಹಿಂಸಾಚಾರ ಮತ್ತು ಹಗೆತನವನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡುವುದರ ಜೊತೆಗೆ ವಿವಾದವನ್ನು ಬಗೆಹರಿಸಲು ಮಾತುಕತೆಯೊಂದೇ ಪರಿಹಾರ ಎಂದು ಪ್ರತಿಪಾದಿಸಿತು.
ಇದನ್ನೂ ಓದಿ: Worlds Most Powerful Militaries : ಜಗತ್ತಿನ ಅತೀ ಬಲಿಷ್ಠ ಮಿಲಿಟರಿ ಯಾವುದು? ಭಾರತ ಯಾವ ಸ್ಥಾನದಲ್ಲಿದೆ? ಇಲ್ಲಿದೆ ನೋಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.