ಹುಬ್ಬಳ್ಳಿ: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಿಳಿಸಿದರು.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ
ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಮೇಕೆದಾಟು ಯೋಜನೆಯ (Mekedatu Padayatre) ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ ಎಂದರು.
ಕಾಂಗ್ರೆಸ್ (Congress) ಆಡಳಿತವಿದ್ದ ಸಂದರ್ಭದಲ್ಲಿ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಕಾಂಗ್ರೆಸ್ ನವರ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.
ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ (Kalasa Banduri) ಯೋಜನೆಗಳಿಂದ ರಾಜ್ಯದ ಜನತೆಗೆ ನೀರು ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪೂರಕ ನಿರ್ಣಯಗಳನ್ನು ಕೈಗೊಳ್ಳಲಿದೆ. ಈ ವಿಷಯದಲ್ಲಿ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ : ರಂಗೋಲಿ ಬಿಡಿಸಿ ಪಾದಯಾತ್ರಿಗಳ ಸ್ವಾಗತ; ಬಾಯಾರಿಕೆಗೆ ಎಳನೀರು!
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಕಳೆದ ಜನವರಿ 9ರಂದ ಶುರುವಾಗಿತ್ತು. ಕೊರೊನಾ (Corona) ಸಾಂಕ್ರಾಮಿಕದ ಪರಿಣಾಮ ಕೋರ್ಟ್ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನು ರಾಮನಗರದಲ್ಲಿ ಅರ್ಧಕ್ಕೆ ಮೊಟಕುಗೊಳಿಸಿದ್ದರು. ಇದೀಗ ಅದೇ ಸ್ಥಳದಿಂದ ಕಾಂಗ್ರೆಸ್ ನಾಯಕರು 'ಮೇಕೆದಾಟು ಪಾದಯಾತ್ರೆ 2.0'ಗೆ ಚಾಲನೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.