ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ(Russia Ukraine War) ಮುಂದುವರೆದಿದೆ. ದಿನೇ ದಿನೇ ಪರಿಸ್ಥಿತಿ ಮತ್ತಷ್ಟು ಭೀಕರವಾಗುತ್ತಿದ್ದು, ಸಾವಿರಾರು ಭಾರತೀಯರು ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾ ಸೇನೆ ಒಂದೊಂದೇ ಪ್ರದೇಶಗಳನ್ನು ಕಬ್ಜಾ ಮಾಡಿಕೊಳ್ಳುತ್ತಿದೆ. ಉಕ್ರೇನ್ ಕೂಡ ರಷ್ಯಾಗೆ ದಿಟ್ಟ ಉತ್ತರ ನೀಡಲು ಪ್ರಯತ್ನಿಸುತ್ತಿದೆ.
ಈ ಮಧ್ಯೆ ಸುಮಾರು 16 ಸಾವಿರ ಭಾರತೀಯರು ಯುದ್ಧ ವಲಯದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ (Indians stuck in Ukraine). ಉಕ್ರೇನ್‌ನಲ್ಲಿ ಸಿಲುಕಿಹಾಕಿಕೊಂಡಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ (Karnataka student died in Ukraine). ಪಶ್ಚಿಮ ಗಡಿಯನ್ನು ತಲುಪಲು ಎಲ್ವಿವ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಗುಂಡು ತಗುಲಿ ನವೀನ್ ಜ್ಞಾನಗೌಡರ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
Conditions of Indians stranded in Ukraine are worsening.
Yet, GOI is not taking effective steps to bring them home.
As usual, PM is MIA. pic.twitter.com/n8MfPAgxvD
— Rahul Gandhi (@RahulGandhi) February 28, 2022
ಇದನ್ನೂ ಓದಿ: ಉಕ್ರೇನ್ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವುದೇಕೆ?
ಯುದ್ಧದ ಮಧ್ಯೆ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮರುಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಹದಗೆಡುತ್ತಿದೆ. ಆದರೂ ಅವರನ್ನು ಮನೆಗೆ ಕರೆತರಲು ಭಾರತ ಸರ್ಕಾರ ಪರಿಣಾಮಕಾರಿಯಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಎಂದಿನಂತೆ ಪ್ರಧಾನಮಂತ್ರಿಗಳು ‘ಮಿಸ್ಸಿಂಗ್ ಇನ್ ಆ್ಯಕ್ಷನ್’ ಆಗಿದ್ದಾರೆ’ ಅಂತಾ ಟೀಕಿಸಿದ್ದಾರೆ.
ಸೋಮವಾರ ಕೂಡ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ‘ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟ ನೋಡಿ ತುಂಬಾ ನೋವಾಗಿದೆ’ ಎಂದು ಹೇಳಿದ್ದರು. ಉಕ್ರೇನ್‌ನ ಪೋಲೆಂಡ್ (Polend) ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಅಲ್ಲಿನ ಯೋಧರು ಹಲ್ಲೆ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ತುಣುಕನ್ನು ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: Narendra Modi : ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಸುಮಾರು 20 ಸಾವಿರ ಭಾರತೀಯರು!
My heart goes out to the Indian students suffering such violence and their family watching these videos. No parent should go through this.
GOI must urgently share the detailed evacuation plan with those stranded as well as their families.
We can’t abandon our own people. pic.twitter.com/MVzOPWIm8D
— Rahul Gandhi (@RahulGandhi) February 28, 2022
‘ಭಾರತೀಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಹಿಂಸೆ, ಅದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು (Video Viral) ಅವರ ಪೋಷಕರು ನೋಡಬೇಕಾದ ಸ್ಥಿತಿ ಬಂದಿರುವುದನ್ನು ನೋಡಿ ತುಂಬಾ ನೋವಾಗಿದೆ. ಯಾವ ಪೋಷಕರಿಗೂ ಇಂತಹ ಸ್ಥಿತಿ ಬರಬಾರದು. ಭಾರತೀಯರಸ್ಥಳಾಂತರ ಯೋಜನೆಯ ವಿಸ್ತೃತ ಮಾಹಿತಿಯನ್ನು ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಜೊತೆ ಹಂಚಿಕೊಳ್ಳಬೇಕು. ನಾವು ನಮ್ಮದೇ ಜನರನ್ನು ಕೈಬಿಡಲಾಗದು’ ಅಂತಾ ಹೇಳಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.